ಬೆಂಗಳೂರು: ಸೆಪ್ಟೆಂಬರ್ ಆರಂಭದಿಂದಲೂ ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಇನ್ನೂ ನಿಂತಿಲ್ಲ. ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಳವಾಗಲಿದೆ. ಇಂದಿನಿಂದ ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ ಹಾಗೂ ವಿಜಯಪುರದಲ್ಲಿ ಇಂದಿನಿಂದ ಸೆ. 28ರವರೆಗೂ ಮಳೆಯಾಗಲಿದೆ.
Advertisement
ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?
Advertisement
Advertisement
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
Advertisement
ದೆಹಲಿ ಹಾಗೂ ಗುಜರಾತ್ ನಲ್ಲಿ ಮಳೆಯ ಆರ್ಭಟ ಮಿತಿ ಮೀರಿದೆ. ದೆಹಲಿಯಲ್ಲಿ ರಸ್ತೆಗಳೆಲ್ಲ ಕೆರೆಗಳಂತಾಗಿವೆ. ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ ಗಢ, ತಮಿಳುನಾಡು, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್, ಪಶ್ಚಿಮ ರಾಜಸ್ಥಾನದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ -ನಾಲ್ವರು ಆರೋಪಿಗಳು ಪೊಲೀಸ್ ಕಸ್ಟಡಿಗೆ