ಬೆಂಗಳೂರು/ನೆಲಮಂಗಲ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಿಂದಾಗಿ ರೈತರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಕಟಾವಿಗೆ ಬಂದಿದ್ದ ರಾಗಿ ಬೆಳೆ ಸಂಪೂರ್ಣವಾಗಿ ನೆಲಕಚ್ಚುವಂತಾಗಿದೆ. ಇನ್ನೂ ಈ ವರ್ಷ ಉತ್ತಮ ಮಳೆಯಿಂದಾಗಿ ರೈತರು ನಾನಾ ಬೆಳೆಗಳನ್ನು ಬೆಳೆದಿದ್ದರು, ಇನ್ನೂ ರಾಗಿ ಬೆಳೆ ಭೋಗವಾಗಿ ಎತ್ತರಕ್ಕೆ ಬೆಳೆದು ರೈತರಲ್ಲಿ ಸಂತಸಕ್ಕೆ ಕಾರಣವಾಗಿತ್ತು. ಈ ನಡುವೆ ಮಳೆಯಿಂದಾಗಿ ತಾಲೂಕಿನಲ್ಲಿ ರಾಗಿ ಬೆಳೆ ಕೈಗೆ ಬರುವ ವೇಳೆಯಲ್ಲಿ ಸಂಪೂರ್ಣವಾಗಿ ನೆಲ ಕಚ್ಚುವಂತಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಲು ಶಿಕ್ಷಕ ಯತ್ನ
Advertisement
Advertisement
ಮಳೆ ಮುಂದುವರಿದರೆ ಜಾನುವಾರುಗಳಿಗೂ ಸಹ ಮೇವು ಸಿಗದ ಪರಿಸ್ಥಿತಿ ಎದುರಾಗಬಹುದು ಎಂದು ರೈತರಲ್ಲಿ ಕಳವಳ ಶುರುವಾಗಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ಈ ವರ್ಷದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮಳೆಯ ಹೊಡೆತ ಬಿದ್ದಿದ್ದು, ಕಟಾವು ಹಂತದಲ್ಲಿದ್ದ ರಾಗಿ ಬೆಳೆ, ಮಳೆಗೆ ನೆಲಕ್ಕೆ ಬಿದ್ದು, ರಾಗಿ ಬೆಳೆ ಕೈತಪ್ಪುವ ಆತಂಕದಲ್ಲಿ ತಾಲೂಕಿನ ರೈತರಿದ್ದಾರೆ. ಇದನ್ನೂ ಓದಿ: ಮೊಬೈಲ್ ಕದಿಯಲು ರೋಗಿಯಾದ ಕಳ್ಳ – ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
Advertisement
Advertisement