– ನದಿ ಪಾತ್ರದ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಭೀತಿ
ಬಾಗಲಕೋಟೆ: ಭಾರೀ ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ.
Advertisement
ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ ಸೇತುವೆ ಮೂಲಕ ಸಂಚಾರ ನಡೆದಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ
Advertisement
Advertisement
ಇದೇ ವರ್ಷದಲ್ಲಿ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆ ಮೇಲೆ ಮೊಳಕಾಲುದ್ದ ನೀರು ಹರಿಯುತ್ತಿದ್ದು, ನದಿ ತೀರದ ಜಮೀನಿನಲ್ಲಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.