ನವದೆಹಲಿ: ಬಿಸಿಲ ಬೇಗೆಯಿಂದ ಬೇಸತ್ತಿದ್ದ ದೆಹಲಿ (Delhi) ಜನರಿಗೆ ಮಳೆರಾಯ ತಂಪೆದರೆ, ಇತ್ತ ಆಂಧ್ರಪ್ರದೇಶ (Andhra Pradesh) ಹಾಗೂ ಉತ್ತರ ಪ್ರದೇಶದಲ್ಲಿ (Uttara Pradesh) ತಾಪಮಾನ ಹೆಚ್ಚಳದಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಇಂದು (ಮೇ 23) ಮುಂಜಾನೆ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ದಿಢೀರ್ ಮಳೆಯಾಗಿ, ತಂಪು ವಾತಾವರಣ ಸೃಷ್ಟಿಯಾಗಿದೆ. ಆದರೆ ಇದರ ನಡುವೆಯೂ ಹವಾಮಾನ ಇಲಾಖೆ ನಗರದಲ್ಲಿ ಮೇ 28ರವರೆಗೆ ಹೀಟ್‌ವೇವ್ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೊಯಮತ್ತೂರಲ್ಲಿ 10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಕೊಲೆ – ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಕಿಡಿ
ಈಗಾಗಲೇ ಉತ್ತರ ಪ್ರದೇಶದ ಕೆಲವು ಭಾಗಗಳು ಮತ್ತು ವಿದರ್ಭದಲ್ಲಿ ದಾಖಲೆಯ ಶಾಖದ ಅಲೆ ವರದಿಯಾಗಿದೆ. ಅಲ್ಲದೇ ದೆಹಲಿ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಪೂರ್ವ ಭಾಗ, ಉತ್ತರಾಖಂಡ, ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿಯೂ ತೀವ್ರ ತಾಪಮಾನ ದಾಖಲಾಗುತ್ತಿದೆ.
ಉತ್ತರ ಪ್ರದೇಶದ ದಕ್ಷಿಣ, ವಿದರ್ಭ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿ ಭಾಗಗಳಲ್ಲಿ ತೀವ್ರ ತಾಪಮಾನದಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಕಾಕ್ರೋಚ್ ಜನತಾ ಪಾರ್ಟಿಗೆ ಸಾಲು ಸಾಲು ಸವಾಲು? – ಎಕ್ಸ್ ಖಾತೆ ಬೆನ್ನಲ್ಲೇ ಇನ್ಸ್ಟಾ ಖಾತೆ ಹ್ಯಾಕ್
ಇನ್ನೂ ಹವಾಮಾನ ಇಲಾಖೆಯು ಮೇ 24ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಜಾರ್ಖಂಡ್, ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಟ್ರಾವಿಸ್ ಹೆಡ್ ಕೈ ಚಾಚಿದ್ರೂ ಹ್ಯಾಂಡ್ ಶೇಕ್ ಮಾಡದ ಕೊಹ್ಲಿ – ಪಂದ್ಯದ ವೇಳೆ ಆಗಿದ್ದೇನು?
