ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಅನಾಹುತಗಳ ಅಬ್ಬರ ಮಾತ್ರ ಕಡಿಮೆಯಾಗಿಲ್ಲ.
Advertisement
ಜಿಲ್ಲಾದ್ಯಂತ ನಿನ್ನೆಯಿಂದ ಶೇ. 80 ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ, ಬೆಟ್ಟ-ಗುಡ್ಡ ಕುಸಿಯುವುದು, ರಸ್ತೆ ಬಿರುಕು ಬಿಡುವುದು, ತೋಟಗಳ ಮಣ್ಣು ಜರಿಯುವುದು ಮಾತ್ರ ನಿಂತಿಲ್ಲ. ಕಳೆದೊಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ವರುಣದೇವ ತಕ್ಕಮಟ್ಟಿಗೆ ಶಾಂತನಾಗಿದ್ದರೂ ಸುಮಾರು 20 ಮೀಟರ್ ಕಾಂಕ್ರೀಟ್ ರಸ್ತೆ ಕುಸಿದಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಬಳಿ ನಡೆದಿದೆ. ಕಲ್ಲತ್ತಿಗರಿಯಿಂದ ಕೆಮ್ಮಣ್ಣುಗುಂಡಿ ಸಂಪರ್ಕ ಕಲ್ಪಿಸುವ ಮಾರ್ಗದ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿದ್ದು ಭೂಮಿಯ ಸುಮಾರು 2 ಅಡಿಯಷ್ಟು ಕುಸಿದಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸಲು ಪ್ರವಾಸಿಗರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಬೆಳಕು ಇಂಪ್ಯಾಕ್ಟ್ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ
Advertisement
ಕೆಲ ಪ್ರವಾಸಿಗರು ಸಂಚರಿಸಲು ಭಯಪಟ್ಟು ವಾಪಸ್ಸಾಗಿದ್ದಾರೆ. ಒಂದು ವೇಳೆ ಬಾಯ್ಬಿಟ್ಟಿರೋ ಈ ಮಾರ್ಗ ಕುಸಿದರೆ ಕೆಮ್ಮಣ್ಣುಗುಂಡಿ ಹಾಗೂ ಹೆಬ್ಬೆ ಜಲಪಾತಕ್ಕೆ ಹೋಗುವ ಪರ್ಯಾಯ ಮಾರ್ಗವೂ ಇಲ್ಲದಿರುವುದರಿಂದ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು 20 ಅಡಿ ಅಗಲದ ರಸ್ತೆಯಲ್ಲಿ ರಸ್ತೆ ಕುಸಿದಿರುವ ಜಾಗಕ್ಕೆ 10 ಅಡಿ ಅಗಲ ರೇಡ್ ಟೇಪ್ ಕಟ್ಟಿ, ಕೇವಲ 10 ಅಡಿ ಜಾಗದಲ್ಲೇ ವಾಹನಗಳು ಸಂಚರಿಸುವಂತೆ ಸೂಚನೆ ನೀಡಿದ್ದಾರೆ.
Advertisement
Advertisement
ಕೆಮ್ಮಣ್ಣುಗುಂಡಿ ನಾಡಿನ ಪ್ರಸಿದ್ಧ ಪ್ರವಾಸಿತಾಣವಾಗಿದ್ದು, ದಿನನಿತ್ಯ ನೂರಾರು ಪ್ರವಾಸಿಗರು ಕೆಮ್ಮಣ್ಣುಗುಂಡಿ ಹಾಗೂ ಸಮೀಪದ ಹೆಬ್ಬೆ ಜಲಪಾತಕ್ಕೆ ಭೇಟಿ ನೀಡುತ್ತಾರೆ. ಮಳೆಗಾಲದಲ್ಲಿ ಇಲ್ಲಿನ ಸೌಂದರ್ಯ ಮತ್ತಷ್ಟು ಇಮ್ಮಡಿಗೊಂಡಿರುತ್ತದೆ. ಆದರೆ, ಈಗ ಈ ಮಾರ್ಗದ ರಸ್ತೆ ಬಿರುಕು ಬಿಟ್ಟಿರುವುದರಿಂದಾಗಿ ಪ್ರವಾಸಿಗರು ಆತಂಕದಲ್ಲೇ ಸಂಚರಿಸುತ್ತಿದ್ದಾರೆ. ಇದನ್ನೂ ಓದಿ: ಹಾಲಿನ ಟ್ಯಾಂಕರ್, ಕಾರು, ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲಿ ಸಾವು, ಬೆಂಕಿಗೆ ಆಹುತಿಯಾದ ಕಾರು