ಚಿಕ್ಕಮಗಳೂರು: ಭಾರೀ ಗಾಳಿ-ಮಳೆಯ ವೇಳೆ ಅಡಿಕೆ ಶೆಡ್‍ಗೆ ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವಿಟ್ಲಾಪುರ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಮಧ್ಯಾಹ್ನದಿಂದ ಸಂಜೆವರೆಗೂ ಭಾರೀ ಮಳೆ ಸುರಿದಿದ್ದು, ರಾತ್ರಿ 9 ಗಂಟೆ ವೇಳೆಗೆ ಧಾರಾಕಾರ ಮಳೆ ವೇಳೆ ಬಡಿದ ಸಿಡಿಲು ಅಡಿಕೆ ಗೋಡೌನ್‍ಗೆ ಬಡಿದಿದೆ. ಈ ವೇಳೆ ಗೋಡಾನ್‍ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಟ್ರ್ಯಾಕ್ಟರ್-ಟ್ರಿಲ್ಲರ್, 15 ಕ್ವಿಂಟಾಲ್ ಒಣ ಅಡಿಕೆ, ಒಂದು ಅಡಿಕೆ ಸುಲಿಯುವ ಮೆಷಿನ್, ಒಂದು ಗೊರಗಲು ಮೆಷಿನ್ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ಬೆಂಕಿಗಾವುತಿಯಾಗಿದೆ. ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?
Advertisement
Advertisement
ಗೋಡೌನ್ ಮುಂಭಾಗದಲ್ಲಿದ್ದ ಗೊಬ್ಬರಿಗಳನ್ನು ಸ್ಥಳಿಯರು ಬೇರೆ ಕಡೆ ಶಿಫ್ಟ್ ಮಾಡಿದ್ದಾರೆ. ಅಡಿಕೆ ಗೋಡೌ ನ್‍ನಲ್ಲಿದ್ದವರು ಮಳೆ ಕಡಿಮೆಯಾಗಿದೆ ಎಂದು ಮನೆಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರು ಗೋಡೌನ್‍ನಲ್ಲಿಯೇ ಇದ್ದಿದ್ದರೆ ಬಹುಶಃ ದೊಡ್ಡ ಮಟ್ಟದ ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇತ್ತು. ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
Advertisement
Advertisement
ಗೋಡೌನ್‍ಗೆ ಬೆಂಕಿ ಬಿದ್ದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಆದರೆ, ಅವರು ಬೇರೆ ಕಡೆ ಹೋಗಿದ್ದರಿಂದ ಬರುವುದು ತಡವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಸ್ಥಳೀಯರೇ ಬೆಂಕಿಯನ್ನು ನಾಂದಿಸಿದ್ದರು. ಆದರೆ, ಇಡೀ ರಾತ್ರಿ ಹೊತ್ತಿ ಉರಿದ ಟ್ರ್ಯಾಕ್ಟರ್ ಬೆಳಗ್ಗೆ 10 ಗಂಟೆಯಾದರೂ ಉರಿಯುತ್ತಲೇ ಇದೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದೆ. ಸರ್ಕಾರ ನಮಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ