ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ತುಂತುರು ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು ದಂಪತಿ ಸಾವನ್ನಪ್ಪಿದ್ದಾರೆ.
ಹಿರಿಯೂರು ತಾಲೂಕಿನ ಕಾರೋಬನಹಳ್ಳಿಯಲ್ಲಿ ಘಟನೆ ನಡೆದಿದ್ದು, ಚನ್ನಕೇಶವ (26) ಮತ್ತು ಸೌಮ್ಯ (21) ಮೃತ ದುರ್ದೈವಿಗಳು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ಯಾವ ನಟರೂ ಇಲ್ಲ – ಕಾಂಗ್ರೆಸ್ ಆರೋಪಕ್ಕೆ ಸುಧಾಕರ್ ತಿರುಗೇಟು
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಗೋಡೆ ತೇವಗೊಂಡಿದ್ದು, ಮನೆಯ ಗೋಡೆ ಕುಸಿತಗೊಂಡಿದೆ. ಇದು ಪಕ್ಕದ ಗುಡಿಸಲಿನ ಮೇಲೆ ಬಿದ್ದ ಪರಿಣಾಮ ಅದರಲ್ಲಿ ವಾಸವಾಗಿದ್ದ ಚನ್ನಕೇಶವ ಮತ್ತು ಸೌಮ್ಯ ಮೃತಪಟ್ಟಿದ್ದಾರೆ.
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಣ್ಣ ವಯಸ್ಸಿನ ದೊಡ್ಡ ಕಲಾವಿದನನ್ನು ಕಳೆದುಕೊಂಡಿದ್ದೇವೆ: ರಮೇಶ್ ಜಾರಕಿಹೊಳಿ