ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: Bengaluru Rain| ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್ ಅಂಡರ್ ಪಾಸ್ ಮುಳುಗಡೆ
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್ ಆರೋಪ