ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಈಶಾನ್ಯ ಮಾನ್ಸೂನ್ (Northeast Monsoon) ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳು ಮತ್ತು ಪುದುಚೇರಿಯ ಕಾರೈಕಲ್‌ಗೆ ಮಳೆಯ (Rain) ಎಚ್ಚರಿಕೆ ನೀಡಿದೆ.
ತಮಿಳುನಾಡಿನ ಕಡಲೂರು, ಮೈಲಾಡುತುರೈ, ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳು ಮತ್ತು ಪುದುಚೇರಿಯ ಕಾರೈಕಲ್‌ನಲ್ಲಿ ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ತಮಿಳುನಾಡು ಮತ್ತು ಪುದುಚೇರಿಯ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ತಂಜಾವೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: 1 ಬಾರಿ ಬೀದಿ ನಾಯಿ ಕಚ್ಚಿದ್ರೆ ಕನಿಷ್ಟ 10 ಸಾವಿರ ಪರಿಹಾರ ಕೊಡಬೇಕು: ಹೈಕೋರ್ಟ್
ಈ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿರಂತರ ಮಳೆಯಿಂದಾಗಿ ಚೆನ್ನೈನ ಶಾಲೆಗಳು ಮತ್ತು ತಿರುವಳ್ಳೂರು ಜಿಲ್ಲೆಯ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಮೋದಿ ವಿರುದ್ಧ ಹೇಳಿಕೆ – ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್