ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ (Gokarna Mahabaleshwar Temple) ಅಬ್ಬರದ ಮಳೆಯಿಂದಾಗಿ ದೇವಾಲಯದ ಆತ್ಮಲಿಂಗ ಕೊಚ್ಚಿ ನೀರಿನಿಂದ ಆವೃತವಾಗಿ ದೇವರ ದರ್ಶನಕ್ಕೆ ಬಂದ ಭಕ್ತರಿಗೆ ವಿಘ್ನ ಉಂಟು ಮಾಡಿತು.
ದೇವಸ್ಥಾನದ ಸಿಬ್ಬಂದಿ ನಿರಂತರ ಪರಿಶ್ರಮದಿಂದ ಇದೀಗ ಗರ್ಭಗುಡಿಯಲ್ಲಿ ಸೇರಿದ್ದ ನೀರನ್ನು ಹೊರಹಾಕಲು ಯಶಸ್ವಿಯಾಗಿದ್ದಾರೆ. ಈ ಹಿಂದೆಯೂ ಸಹ ದೇವಸ್ಥಾನದ ಗರ್ಭಗುಡಿಗೆ ಕೊಳಚೆ ನೀರು ತುಂಬಿ ಸಮಸ್ಯೆ ಉಂಟುಮಾಡಿತ್ತು. ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣವಚನಕ್ಕೆ ಬಿಎಸ್‌ವೈಗೆ ಆಹ್ವಾನ
Advertisement
Advertisement
ಮಹಾಬಲೇಶ್ವರ ದೇವಾಲಯದ ತೀರ್ಥ ಸೋಮಸೂತ್ರದ ಮೂಲಕ ಸ್ಮಶಾನಕಾಳಿ ಮಂದಿರದ ಹತ್ತಿರ ಸಂಗಮ ನಾಲಾಕ್ಕೆ ಸೇರುವ ಬಳಿ ಸೇತುವೆ ನಿರ್ಮಿಸಿದ್ದು, ಇದರ ಅಡಿಪಾಯದ ಎತ್ತರ ಹೆಚ್ಚಿಸಿರುವುದು ಹಾಗೂ ಸೇತುವೆ ನಿರ್ಮಾಣದ ವೇಳೆ ಹಾಕಿದ ಮಣ್ಣನ್ನು ಆಡಳಿತ ತೆಗೆಯದಿರುವುದು ಈ ಆವಾಂತರಕ್ಕೆ ಕಾರಣವಾಗಿದೆ.
Advertisement
ಸೇತುವೆ ನಿರ್ಮಾಣದ ವೇಳೆ ಮಂದಿರಕ್ಕೆ ತೊಂದರೆಯಾಗುವ ಕುರಿತು ಆಡಳಿತದವರ ಮಾಹಿತಿ ಹಾಗೂ ಅಭಿಪ್ರಾಯ ಕೇಳಬೇಕಿತ್ತು ಎಂದು ಸ್ಥಳೀಯರು ದೂರಿದ್ದಾರೆ. ಮಳೆಗಾಲ ಪ್ರಾರಂಭದಲ್ಲೇ ಹೀಗಾದರೆ ಮುಂದೆ ಏನಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ – ಅರಬ್ಬಿ ಸಮುದ್ರ ಭಾಗದಲ್ಲಿ ಮೀನುಗಾರಿಕೆ, ಪ್ರವಾಸಿಗರಿಗೆ ನಿರ್ಬಂಧ
Advertisement
ಸಂಗಮ ನಾಲಾ ಸಮುದ್ರ ಸೇರುವಲ್ಲಿನ ಕೋಡಿಯನ್ನ (ಮರಳ ದಿನ್ನೆ) ಮಂದಿರದ ಸಿಬ್ಬಂದಿ ಸತತ ಎರಡು ತಾಸಿಗೂ ಅಧಿಕಕಾಲ ಕಡಿದು ನೀರು ಸರಾಗವಾಗಿ ಹೋಗುವಂತೆ ಬಿಡಿಸಿಕೊಟ್ಟರು. ಸುರಿಯುವ ಮಳೆಯನ್ನು ಲೆಕ್ಕಿಸಿದೆ ಶ್ರಮಿಸಿದ ಸಿಬ್ಬಂದಿ ಇದೀಗ ಗರ್ಭಗುಡಿಯಲ್ಲಿ ನೀರು ಖಾಲಿ ಮಾಡಿದ್ದಾರೆ. ನಂತರ ಗರ್ಭಗುಡಿ ಸ್ವಚ್ಛಗೊಳಿಸಿ ದಿನದ ಧಾರ್ಮಿಕ ಕಾರ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.