ಬೆಂಗಳೂರು: ರವಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಬೈಚಾಪುರ ಗ್ರಾಮದ ರಸ್ತೆಯ ಇಕ್ಕೆಲಗಳಲ್ಲಿ 15ಕ್ಕೂ ಹೆಚ್ಚು ಮರಗಳು ಧರೆಗುರಳಿವೆ. ರಾತ್ರಿ ಸುರಿದ ಭಾರೀ ಮಳೆಗೆ ಗ್ರಾಮದ ಜನರಲ್ಲಾ ಭಯಭೀತರಾಗಿದ್ದರು. ರಸ್ತೆಯ ಬದಿಯ ಮರಗಳು ನೇರವಾಗಿ ವಿದ್ಯುತ್ ತಂತಿಗಳ ಮೇಲೆ ಬಿದ್ದಿದರಿಂದ ಊರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೈಸೂರು ನಗರದಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಅನೇಕ ಮರಗಳು ಬಿದ್ದಿವೆ. ಮಹಾನಗರ ಬೆಂಗಳೂರಿನ ವಿದ್ಯಾರಣ್ಯಪುರಂನ ಮೂರು ಮೆನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳ್ಕಕ್ಕ್ಕೆ ಸ್ಥಳೀಯಪಾಲಿಕೆ ಸದಸ್ಯ ಎಂ..ವಿ.ರಾಮಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮ್‍ಪ್ರಸಾದ್ ಮನೆಯ ಮಾಲೀಕರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.