ದಾವಣಗೆರೆ: ಶುಕ್ರವಾರ ರಾತ್ರಿ ಸುರಿದ ಮಳೆಗೆ ದಾವಣಗೆರೆಯ ಭಾಷಾ ನಗರದ ಆರನೇ ಕ್ರಾಸ್ ನಲ್ಲಿರುವ ಮನೆಗಳು ಸಂಪೂರ್ಣ ಜಲಾವೃತಗೊಂಡಿವೆ. ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಅಲ್ಲಿನ ನಿವಾಸಿಗಳು ನೀರನ್ನು ಹೊರ ಹಾಕುತ್ತಿದ್ದಾರೆ.
ಪ್ರತಿ ಬಾರಿ ಮಳೆ ಜಾಸ್ತಿ ಬಂದರೆ ಇಲ್ಲಿನ ನಿವಾಸಿಗಳು ನರಕವನ್ನು ಅನುಭವಿಸುವಂತಾಗುತ್ತದೆ. ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿವೆ. ಇದನ್ನೂ ಓದಿ: ಕೇವಲ ಅರ್ಧ ಗಂಟೆ ಮಳೆಗೆ ತತ್ತರಿಸಿದ ಬೆಂಗ್ಳೂರು- 100ಕ್ಕೂ ಹೆಚ್ಚು ಮನೆ ಜಲಾವೃತ
ಇಲ್ಲಿ ವಾಸಿಸುವ ಜನರು ಬಹುತೇಕ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಮನೆಗಳಿಗೆ ಏಕಾಏಕಿ ನೀರು ನುಗ್ಗಿದ ಹಿನ್ನಲೆ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾಗೂ ಅಡುಗೆ ಸಾಮಗ್ರಿಗಳು ಜಲಾವೃತಗೊಂಡಿದ್ದು, ಸಂಕಷ್ಟ ಅನುಭವಿಸುವಂತಾಗಿದೆ. ಅದರಲ್ಲೂ ಚಿಕ್ಕ ಚಿಕ್ಕ ಕಂದಮ್ಮಗಳಿದ್ದು ಮಾರಕ ರೋಗಕ್ಕೆ ತುತ್ತಾಗಿ ಸಾವನ್ನಪ್ಪುವಂತಾಗಿದೆ.
ಪ್ರತಿನಿತ್ಯ ನರಕದಲ್ಲಿ ಜೀವನ ಮಾಡುವ ನಮಗೆ ಒಳ್ಳೆಯ ಚರಂಡಿ ವ್ಯವಸ್ಥೆ ಹಾಗೂ ಮಳೆ ನೀರು ಸರಾಗವಾಗಿ ಹರಿಯುವ ರೀತಿ ವ್ಯವಸ್ಥೆ ಮಾಡಬೇಕು ಎಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದರು. ಹಲವು ಬಾರಿ ಇಲ್ಲಿನ ಸ್ಥಳೀಯರು ಜನ ಪ್ರತಿನಿಧಿಗಳಿಗೆ ಮನವಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಕೇವಲ ಚುನಾವಣೆಗೆ ಮಾತ್ರ ಬರ್ತಾರೆ ವಿನಃ ಸಮಸ್ಯೆಗಳನ್ನು ಬಗೆಹರಿಸಲು ಬರುವುದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv