– ನಾಳೆ ಹಲವೆಡೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊ೦ಡ ಪರಿಣಾಮ ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಟ್ರಂಪ್ ಇರುವಾಗಲೇ ಶ್ವೇತಭವನದ ಬಳಿ ಗುಂಡಿನ ದಾಳಿ – ಬಂದೂಕುಧಾರಿ ಸಾವು
ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗುಡುಗು ಮಿಂಚಿನ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮೇ 25ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲಿ ಸಾಧಾರಣದಿಂದ ಕೂಡಿದ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್‌ನಲ್ಲಿ ಬಿರುಗಾಳಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ ಬರೆದಿದ್ದ ಕಲಬುರಗಿ ವಿದ್ಯಾರ್ಥಿನಿ ಆತ್ಮಹತ್ಯೆ
