ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರಿಯಲಿದೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಅಮ್ಮ – ರಕ್ಷಣೆಗೆ ಮುಂದಾದ ಮಗನೂ ಸಾವು
ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ
ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‍ಎಎಲ್‍ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‍ನಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.