– ಚಾಮರಾಜನಗರ, ಶಿವಮೊಗ್ಗ, ಭಟ್ಕಳದಲ್ಲಿ ಅವಾಂತರ
ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ, ಅವಾಂತರ ಮುಂದುವರೆದಿದೆ. ಕಲಬುರಗಿಯಲ್ಲಿ (Kalaburagi) ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಹಳ್ಳಕೊಳ್ಳಗಳು ತುಂಬಿ ಹರಿದಿವೆ. ಬೈಕ್ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಪುಳಕಿತರಾಗಿದ್ದಾರೆ. ಹಲವೆಡೆ ಮಳೆ ಅವಾಂತರವಾಗಿದ್ದು, ಸಾವು-ನೋವು ಸಂಭವಿಸಿದೆ.
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದೆ. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ. ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಮನೆಗೆ ವಾಪಾಸ್ ಬರುತ್ತಿದ್ದಾಗ ಸಿಡಿಲು ಬಡಿದು ಮಹೇಶ್ ಎಂಬಾತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇಂದು, ನಾಳೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಮಳೆ ಮುನ್ಸೂಚನೆ
ಅಕಾಲಿಕ ಗಾಳಿ ಮಳೆಗೆ ಆಳಂದ ತಾಲ್ಲೂಕಿನಲ್ಲಿ ನಾನಾ ಅವಾಂತರ ಸೃಷ್ಟಿಯಾಗಿದೆ. ಒಂದೂ ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಗಾಳಿ ಸಹಿತ ಮಳೆಗೆ ಬೈಕ್‌ಗಳು ಕೊಚ್ಚಿ ಹೋಗಿವೆ. ಆಳಂದ ತಾಲ್ಲೂಕಿನ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿದು ಅವಾಂತರ ಸೃಷ್ಟಿಯಾಗಿದೆ.
ಕಲಬುರಗಿಯ ಖಜೂರಿ ಬಳಿ ಭಾರೀ ಗಾಳಿಗೆ ಲಾರಿ ಪಲ್ಟಿಯಾಗಿದೆ. ಗಾಳಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನು ಬಿರುಗಾಳಿ ಸಹಿತ ಮಳೆಗೆ ನೂರಾರು ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದನ್ನೂ ಓದಿ: ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!
ವಿಜಯನಗರದ ಕೊಟ್ಟೂರಿನಲ್ಲಿ ಮನೆ ಛಾವಣಿ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಭಾಗದಲ್ಲೂ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಭಾರೀ ಮಳೆ ಗಾಳಿಗೆ ಜಕ್ಕಳ್ಳಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಹಾಸನದ ಸಕಲೇಶಪುರದಲ್ಲಿ ಭಾರೀ ಮಳೆ ಕಾರಣ ಮರ ಉರುಳಿ ಮನೆ ಜಖಂ ಆಗಿದೆ.
ಬೀದರ್‌ನಲ್ಲಿ ಬಿದ್ದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ರಸ್ತೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದುಬಿದ್ದಿದೆ. ಹೊನ್ನಾಳಿಯಲ್ಲಿ ಅಕಾಲಿಕ ಮಳೆಗೆ ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಶಿವಮೊಗ್ಗದಲ್ಲಿ ಶ್ವಾನವೊಂದು ಮಳೆಯಲ್ಲಿ ಕುಣಿದು ಕುಪ್ಪಳಿಸಿದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: 7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿದಿದೆ. ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.