– ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
-ನಗರದಲ್ಲಿ ಇನ್ನೂ 3 ದಿನಗಳ ಕಾಲ ಮಳೆ ಮುನ್ಸೂಚನೆ
Advertisement
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ (Bengaluru) ಬಹುತೇಕ ಕಡೆ ರಾತ್ರಿ ಇಡೀ ಜಿಟಿ ಜಿಟಿ ಮಳೆಯಾಗಿದೆ. ಬೆಂಗಳೂರು ನಗರ- ಗ್ರಾಮಾಂತರ ಭಾಗದಲ್ಲಿ ಮುಂಜಾನೆಯೂ ಮಳೆ (Rain) ಮುಂದುವರೆದಿದೆ. ಮಳೆಯಿಂದಾಗಿ ಕೆಲಸ- ಕಾಲೇಜಿಗೆ ಹೋಗುವವರು, ವಾಹನ ಸವಾರರು ಪರದಾಡುತ್ತಿದ್ದಾರೆ.
Advertisement
ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Advertisement
Advertisement
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಇಂದು (ಮಂಗಳವಾರ) – ನಾಳೆ (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.