ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ.
ಬುಧವಾರ 48 ಸಾವಿರ ಕ್ಯೂಸೆಕ್ ಇದ್ದ ನೀರಿನ ಒಳ ಹರಿವು ಇಂದು 99 ಸಾವಿರ ಕ್ಯೂಸೆಕ್ ಹೆಚ್ಚಳ ಕಂಡಿದೆ. ರಾಜಾಪೂರ ಬ್ಯಾರೇಜ್‍ದಿಂದ 79,470 ಕ್ಯೂಸೆಕ್ ನೀರು ಮತ್ತು ದೂದಗಂಗಾ ನದಿಯಿಂದ 19,536 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದುಬರುತ್ತಿದೆ.
Advertisement
ಹಿಪ್ಪರಗಿ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಹೊರಕ್ಕೆ ಬಿಡಲಾಗುತ್ತಿದೆ. ಚಿಕ್ಕೋಡಿ ತಾಲೂಕಿನ ಕೆಳಹಂತದ 5 ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು, ಭಿವಶೀ-ಜಾತ್ರಾಟ್, ಭೋಜ-ಕಾರದಗಾ, ಭೋಜವಾಡಿ-ಕುನ್ನೂರು, ಮಾಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿವೆ.
Advertisement
ನೋಡಲ್ ಅಧಿಕಾರಿಗಳು ಹಾಗೂ ಪೊಲೀಸರು ನದಿ ತೀರದ ಗ್ರಾಮದ ಜನರಿಗೆ ನದಿಯಲ್ಲಿ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.