ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿ ಅವಾಂತರ ಸೃಷ್ಟಿಸಿದ್ದಾನೆ. ಹಲವೆಡೆ ಭಾರೀ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಅಕಾಲಿಕ ಮಳೆಯಿಂದಾಗಿ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ.
ಬೀದರ್:
ಜಿಲ್ಲೆಯಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನಗರದ ಪ್ರಮುಖ ರಸ್ತೆ ಮೇಲೆ ನೀರು ಹರಿದು ಅವಾಂತರ ಸೃಷ್ಟಿಯಾಗಿದೆ. ಹೊಸ ಬಸ್ ನಿಲ್ದಾಣ, ಮಾರ್ಕೆಟ್ ಪೊಲೀಸ್ ಠಾಣೆ ಮುಂಭಾಗ ಹಾಗೂ ಬಿದ್ರಿ ಸರ್ಕಲ್‌ನಲ್ಲಿ ರಸ್ತೆ ಮೇಲೆ ಒಂದು ಅಡಿಗೂ ಅಧಿಕ ನೀರು ಹರಿದಿದೆ. ಧಾರಾಕಾರ ಮಳೆಗೆ ಚರಂಡಿ ನೀರು ರಸ್ತೆ ಮೇಲೆ ಹರಿದ ಪರಿಣಾಮ ನಗರದಲ್ಲಿ ಸಂಚಾರ ಮಾಡಲು ವಾಹನ ಸವಾರರು ಹೈರಾಣಾದರು. ಇನ್ನೂ ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಬೀದರ್, ಔರಾದ, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ. ರಣಬಿಸಿಲಿನಿಂದ ಕೆಂಗೆಟ್ಟಿದ್ದ ಜನರಿಗೆ ಅಕಾಲಿಕ ಮಳೆ ತೆಂಪೆರೆದಿದ್ದು, ಭಾರೀ ಬಿರುಗಾಳಿಗೆ ಗಡಿ ಜಿಲ್ಲೆಯ ಜನರು ಅಕ್ಷರಷಃ ಬೆಚ್ಚಿ ಬಿದ್ದಿದ್ದಾರೆ.ಇದನ್ನೂ ಓದಿ: ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
ಕಲಬುರಗಿ:
ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಅಕಾಲಿಕ ಮಳೆ ಸುರಿದಿದ್ದು, ಪರಿಣಾಮ ವಿವಿಧೆಡೆ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ನೀಲೂರು ಗ್ರಾಮದಲ್ಲಿ 7 ಎಕರೆ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ.
ಕೊಪ್ಪಳ:
ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದ್ದು, ಗಾಳಿ ಸಹಿತ ಧಾರಾಕಾರವಾಗಿ ಅರ್ಧಗಂಟೆ ಕಾಲ ವರುಣ ಅಬ್ಬರಿಸಿದ್ದಾನೆ. ಕಾದು ಕೆಂಡವಾಗಿದ್ದ ಭೂಮಿಗೆ ಮಳೆರಾಯ ತಂಪೆರೆದಿದ್ದು, ರೈತರಲ್ಲಿ ಮಂದಹಾಸ ಮೂಡಿದೆ. ಇನ್ನೂ ಕಾರಟಗಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಒಂದೆಡೆ 63ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದ್ದು, ಮತ್ತೊಂದೆಡೆ ಸಿಡಿಲು ಬಡಿದು ತೆಂಗಿನಮರ ಹೊತ್ತಿ ಊರಿದಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಭತ್ತದ ರಾಶಿ ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಸಿಡಿಲು ಬಡಿದು ಮಳೆ ಹೊಡೆತಕ್ಕೆ ಒಂದು ಎತ್ತು, ಹಸು ಬಲಿಯಾಗಿದ್ದು, ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.
ಕೊಡಗು:
ಜಿಲ್ಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಮಾಳಗದ್ದೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲಿನ ಹೊಡೆತಕ್ಕೆ ಮನೆ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಜೊತೆಗೆ ಮನೆಯ ಗೋಡೆ ಹಾಗೂ ನೆಲದಲ್ಲಿ ಬಿರುಕು ಕಾಣಿಸಿಕೊಂಡಿದೆ.ಇದನ್ನೂ ಓದಿ: ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿಗೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ