ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಅಬ್ಬರದ ಮಳೆ ಮುಂದಿನ ಎರಡು ದಿನ ತಗ್ಗಲಿದೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಒಂದೆರಡು ಬಾರಿ ಜೋರು ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಕನಿಷ್ಠ 19, ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿರುವ ಹಿನ್ನೆಲೆ ಬುಧವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿಯೂ ಮಳಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ನಿಕ್ ಜೊತೆಗಿನ ವಿಚ್ಛೇದನ ಗಾಸಿಪ್ಗೆ ಬ್ರೇಕ್ ಹಾಕಿದ ಪ್ರಿಯಾಂಕ ಚೋಪ್ರಾ
Advertisement
Advertisement
ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಸಿಡಿಲು ಮತ್ತು ಮಿಂಚಿನ ಎಚ್ಚರಿಕೆ ನೀಡಲಾಗಿದ್ದು, ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಇಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಅಪ್ಪು ಪುತ್ಥಳಿಗೆ ಮುತ್ತಿಟ್ಟು ರಾಘವೇಂದ್ರ ರಾಜ್‍ಕುಮಾರ್ ಭಾವುಕ
Advertisement
Advertisement
ನಾಳೆ ಪಶ್ಚಿಮ ಘಟ್ಟದ ಪ್ರದೇಶ ಹಾಗೂ ದಕ್ಷಿಣ ಒಳನಾಡಿನ ದಕ್ಷಿಣದ ಕೆಲ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದ್ದು ಯಾವುದೇ ಬಾರಿ ಮಳೆಯ ಅಲರ್ಟ್ ಇರೋದಿಲ್ಲ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ.