ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಾಯಕ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ಲುಕ್ ಅನಾವರಣಗೊಂಡಿದೆ. ಪ್ರಕೃತಿಯ ಮಡಿಲಿಲ್ಲ ಒಂದು ರೀತಿಯ ಸಂತನಂತೆ ಅವರು ಕಂಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ನಾಯಕಿಯ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಇದೀಗ ನಾಯಕನ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ.
ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದೆ ಚಿತ್ರತಂಡ. ರಮ್ಯಾ ಅವರ ಚೊಚ್ಚಲು ನಿರ್ಮಾಣದ ಸಿನಿಮಾ ಇದಾಗಿದ್ದರಿಂದ ಅತೀವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಇದನ್ನೂ ಓದಿ: ಸಿನಿಮಾ ಮೂಲಕ ಪತಿಯ ಪ್ರಜಾಕೀಯಕ್ಕೆ ಸಾಥ್ ನೀಡಿದ ಪ್ರಿಯಾಂಕ ಉಪೇಂದ್ರ
ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದ ಮೂಲಕವೇ ನಾಯಕಿಯಾಗಿ ರಮ್ಯಾ ಮತ್ತೆ ಸಿನಿಮಾ ರಂಗ ಪ್ರವೇಶ ಮಾಡಬೇಕಿತ್ತು. ಸಿನಿಮಾದ ಟೈಟಲ್ ಲಾಂಚ್ ಮಾಡಿದಾಗ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಇಬ್ಬರ ಹೆಸರೂ ಇತ್ತು. ಆದರೆ, ಕೊನೆ ಕ್ಷಣದ ಬದಲಾವಣೆಯಲ್ಲಿ ರಮ್ಯಾ ಬದಲಾಗಿ ಬೇರೊಬ್ಬ ಕಲಾವಿದೆ ನಾಯಕಿಯಾಗಿ ಆಯ್ಕೆಯಾದರು. ರಮ್ಯಾ ಬದಲಾಗಿ ಆ ಪಾತ್ರವನ್ನು ಸಿರಿ ನಿರ್ವಹಿಸಿದ್ದಾರೆ.