ರಾಯಚೂರು: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ (Raja Amareshwar Nayak) ಅವರ ಜಾತಿ ಪ್ರಮಾಣ ಪತ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಕಲಬುರಗಿ ಹೈಕೋರ್ಟ್ (High Court) ಪೀಠ ಏ.19ಕ್ಕೆ ಮುಂದೂಡಿದೆ. ಇದರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನವೇ ತೀರ್ಪು ಹೊರಬೀಳುವ ಸಾಧ್ಯತೆಯಿದೆ.
ರಾಜಾ ಅಮರೇಶ್ವರ ನಾಯಕ ಕ್ಷತ್ರಿಯ ಸಮುದಾಯಕ್ಕೆ ಸೇರಿದ್ದು, ಎಸ್‍ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ನಾಯಕ ಸಮುದಾಯದ ಮುಖಂಡ ನರಸಿಂಹ ನಾಯಕ್ ಎಂಬವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಏ.19ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ಏ.19 ರಂದು ಜಾತಿ ಬಗ್ಗೆ ಅಫಿಡೆವಿಟ್ ಸಲ್ಲಿಸುವಂತೆ ಕೋರ್ಟ್ ರಾಜಾ ಅಮರೇಶ್ವರ ನಾಯಕ ಅವರಿಗೆ ಸೂಚಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು 10 ದಿನ ಎನ್‍ಐಎ ಕಸ್ಟಡಿಗೆ
Advertisement
Advertisement
ಏ.18 ಕ್ಕೆ ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವ ರಾಜಾ ಅಮರೇಶ್ವರ ನಾಯಕ ಅವರಿಗೆ ಇದೀಗ ನ್ಯಾಯಾಲಯದ ತೀರ್ಪಿನ ಆತಂಕ ಶುರುವಾಗಿದೆ. ವಿರುದ್ಧ ತೀರ್ಪು ಬಂದರೆ ಈ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಆಗಲಿದೆಯೇ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಇದರ ನಡುವೆ ಟಿಕೆಟ್ ವಂಚಿತ ಆಕಾಂಕ್ಷಿ ಬಿ.ವಿ.ನಾಯಕ್ ಸಹ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ