ಯಾದಗಿರಿ: ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ (Raja Venkatappa Naik) ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಶಾಸಕರಾಗಿದ್ದ ದಿವಂಗತ ರಾಜಾ ವೆಂಕಟಪ್ಪ ನಾಯಕರ ಪುತ್ರ ರಾಜಾ ವೇಣುಗೋಪಾಲ ನಾಯಕಗೆ (Raja Venugopal Naik) ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ದಿವಂಗತ ರಾಜಾ ವೆಂಕಟಪ್ಪ ನಾಯಕ ಕುಟುಂಬಕ್ಕೆ ಮತ್ತೊಮ್ಮೆ ಮಣೆ ಹಾಕಿದೆ. ಅನುಕಂಪದ ಆಧಾರ ಮೇಲೆ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಇದೆ. ಇದನ್ನೂ ಓದಿ: ರಾಜ್ಯದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬಾಕಿ
- Advertisement3
ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಈಗಾಗಲೇ ಚುನಾವಣಾ ಆಯೋಗ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ. ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
- Advertisement
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಅಭ್ಯರ್ಥಿಗಳು ಸೇರಿ 57 ಹುರಿಯಾಳುಗಳನ್ನು ಅಖೈರುಗೊಳಿಸಿದೆ. ಇದನ್ನೂ ಓದಿ: ಎರಡೂ ಪಟ್ಟಿ ಸೇರಿ 6 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್