ಮಗಧೀರ, ಬಾಹುಬಲಿ, ಬಾಹುಬಲಿ 2, ಆರ್ಆರ್ಆರ್ (RRR) ಸಿನಿಮಾಗಳನ್ನ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿರುವ ರಾಜಮೌಳಿ ಅವರು ಇದೀಗ ತಮ್ಮ ಕನಸಿನ ಯೋಜನೆ ಬಗ್ಗೆ ಬಾಯ್ಬಿಟ್ಟಿದ್ದಾರೆ. RRR ನಂತರ ಮಹಾಭಾರತ (Mahabharatha) ಮಾಡುವ ಬಗ್ಗೆ ರಾಜಮೌಳಿ ರಿಯಾಕ್ಟ್ ಮಾಡಿದ್ದಾರೆ.
ಭಾರತೀಯ ಸಿನಿಮಾರಂಗದಲ್ಲಿ ತಮ್ಮದೇ ಭಿನ್ನ ಶೈಲಿಯಲ್ಲಿ ಗುರುತಿಸಿಕೊಂಡವರು ರಾಜಮೌಳಿ. ಒಂದು ಸಿನಿಮಾ ಮಾಡ್ತಿದ್ದಾರೆ ಅಂದರೆ ಸಾಕಷ್ಟು ವರ್ಷಗಳ ತಯಾರಿಯೊಂದಿಗೆ ರಾಜಮೌಳಿ ಅಖಾಡಕ್ಕೆ ಇಳಿಯುತ್ತಾರೆ. ಹಾಗಾಗಿ ಸಕ್ಸಸ್ಫುಲ್ ನಿರ್ದೇಶಕನಾಗಿ ರಾಜಮೌಳಿ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಹಾಸಿಗೆಯಲ್ಲಿ ರೋಷನ್ ಇರಬೇಕು’ ಡೈಲಾಗ್ ಬಿಟ್ಟ ನಿಹಾರಿಕಾ ವಿರುದ್ಧ ಕಿಡಿಕಾರಿದ ನೆಟ್ಟಿಗರು
ಖ್ಯಾತ ನಿರ್ದೇಶಕ ರಾಜಮೌಳಿಗೆ ಕಾರ್ಯಕ್ರಮವೊಂದರಲ್ಲಿ ಮಹಾಭಾರತವನ್ನ ತೆರೆಯ ಮೇಲೆ ತರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಕನಸಿನ ಪ್ರಾಜೆಕ್ಟ್ ಮಹಾಭಾರತ ಕುರಿತಾಗಿ ಈ ಹಿಂದೆ ಮಾತನಾಡಿದ್ದೀರಿ, ಒಂದು ವೇಳೆ ನೀವು ಚಿತ್ರವನ್ನು ಮಾಡುವುದಾದರೆ ಎಷ್ಟು ಭಾಗಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತಿರಾ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.
ಇದಕ್ಕೆ ಉತ್ತರಿಸಿದ ರಾಜಮೌಳಿ, ಈ ಚಿತ್ರವನ್ನು ಮಾಡುವ ಮೊದಲು ದೇಶದ ಎಲ್ಲ ಆವೃತ್ತಿಗಳಲ್ಲಿ ಸಿಗುವ ಮಹಾಭಾರತವನ್ನು ಓದಿ ಅರ್ಥೈಸಿಕೊಳ್ಳಲು ಕನಿಷ್ಠ ಒಂದು ವರ್ಷ ಸಮಯಾವಕಾಶ ಬೇಕು. ಅದನ್ನು ಫಿಲ್ಮ್ ರೀತಿ ಮಾಡಬೇಕಾದರೆ ಕನಿಷ್ಠ 10 ಭಾಗಗಳನ್ನಾಗಿ ಮಾಡಬೇಕು. ಆದರೆ ನಿಖರವಾಗಿ ಎಷ್ಟು ಆಗುತ್ತದೆ ಅಂತ ಗೊತ್ತಿಲ್ಲ ಎಂದಿದ್ದಾರೆ. ಇನ್ನು, ಈ ವಿಷಯವನ್ನು ಕೇಳಿದ್ದೆ ತಡ ಅಭಿಮಾನಿಗಳು, ರಾಜ್ಮೌಳಿ ನಿರ್ದೇಶನದಲ್ಲಿ ಹೇಗೆ ಮಹಾಭಾರತ ಮೂಡಿ ಬರಬಹುದೆಂದು ಎಂದು ಎದುರು ನೋಡ್ತಿದ್ದಾರೆ.