Jailer: ರಜನಿಕಾಂತ್- ಶಿವಣ್ಣ ಆ್ಯಕ್ಟಿಂಗ್ ಚಿಂದಿ ಎಂದ ಪ್ರೇಕ್ಷಕರು

Public TV
2 Min Read
Jailer film 2 1

ಸೂಪರ್ ಸ್ಟಾರ್ ರಜನಿಕಾಂತ್(Rajanikanth)- ಶಿವಣ್ಣ (Shivarajkumar) ಕಾಂಬೋ ಸಿನಿಮಾ ‘ಜೈಲರ್’ (Jailer) ಸಿನಿಮಾ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಆಗಸ್ಟ್ 10 ರಿಲೀಸ್ ಆಗಿ ಮೊದಲ ದಿನವೇ ಭರ್ಜರಿ ಪ್ರದರ್ಶನ ಕಾಣುತ್ತಿದೆ. ‘ಬೀಸ್ಟ್’ ಸಿನಿಮಾದಿಂದ ಕೈ ಸುಟ್ಟುಕೊಂಡಿದ್ದ ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರದಿಂದ ಯಶಸ್ಸು ಸಿಕ್ಕಿದೆ.

rajanikanth 1

ಕೆಲ ವರ್ಷಗಳ ನಂತರ ತಲೈವಾ ‘ಜೈಲರ್’ (Jailer) ಮೂಲಕ ದರ್ಶನ ನೀಡಿದ್ದಾರೆ. ಚಿತ್ರದಲ್ಲಿ ಸಿಂಪಲ್ ಕಾಮನ್ ಮ್ಯಾನ್ ಮುತ್ತುವೇಲ್ ಆಗಿ ಕಾಣಿಸಿಕೊಳ್ಳುವ ತಲೈವಾ, ದ್ವಿತೀಯಾರ್ಧದಲ್ಲಿ ಟೈಗರ್ ಮುತ್ತುವೇಲ್ ಪಾಂಡಿಯನ್ ಆಗಿ ಮಾಸ್ ಅವತಾರದಲ್ಲಿ ಅಬ್ಬರಿಸಿದ್ದಾರೆ.

Jailer

ದೇವರ ಮನೆಯಲ್ಲಿ ಪೂಜೆ ಮಾಡುತ್ತಾ ಎಂಟ್ರಿ ನೀಡುವ ಮುತ್ತುವೇಲ್ ಬಹಳ ಸಿಂಪಲ್ ವ್ಯಕ್ತಿ. ಮಡದಿ, ಮಗ, ಸೊಸೆ- ಮೊಮ್ಮಗನ ಜತೆ ಸರಳ ಸುಖ ಸಂಸಾರ ನಡೆಸುವ ಕಾಮನ್ ಮ್ಯಾನ್. ಮುತ್ತುವೇಲ್ ಮಗ ಅರ್ಜುನ್ ಪೊಲೀಸ್ ಅಧಿಕಾರಿಯಾಗಿದ್ದು, ಪ್ರಕರಣವೊಂದನ್ನು ಭೇದಿಸಲು ಹೋಗಿ ಕಣ್ಮರೆಯಾಗ್ತಾನೆ. ಹೀಗೆ ಕಣ್ಮರೆಯಾಗುವ ಮಗನನ್ನು ಹುಡುಕಲು ನಾಯಕ ಮುತ್ತುವೇಲ್ ಮುಂದಾಗಲಿದ್ದು, ಯಾವ ರೀತಿ ಸೇಡು ತೀರಿಸಿಕೊಳ್ಳಲಿದ್ದಾನೆ ಎಂಬುವುದೇ ಚಿತ್ರದ ಕಥೆಯಾಗಿದೆ. ಇದನ್ನೂ ಓದಿ:ಸಿಕ್ಸ್ ಪ್ಯಾಕ್ ಅವತಾರದಲ್ಲಿ ಚಾರ್ಲಿ ಬೆಡಗಿ ಸಂಗೀತಾ

shivarajkumar with rajinikanth

ನಾಯಕ ಮುತ್ತುವೇಲ್ ತನ್ನ ಮಗನನ್ನು ಹುಡುಕುವ ಯತ್ನದಲ್ಲಿ ಕರ್ನಾಟಕ ಮೂಲದ ಡಾನ್ ನರಸಿಂಹನ ಸಹಾಯ ಪಡೆದುಕೊಳ್ತಾನೆ. ಈ ಪಾತ್ರವನ್ನು ಶಿವಣ್ಣ ನಿರ್ವಹಿಸಿದ್ದಾರೆ. ಕನ್ನಡದಲ್ಲಿಯೇ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಶಿವಣ್ಣ ಮಂಡ್ಯ ಮೂಲದ ಗ್ಯಾಂಗ್‌ಸ್ಟರ್ ಆಗಿದ್ದು ನಾಯಕನಿಗೆ ತನ್ನ ಮಗನನ್ನು ಹುಡುಕಲು ಸಹಾಯ ಮಾಡಲಿದ್ದಾರೆ. ಶಿವರಾಜ್ ಕುಮಾರ್ ನಿರ್ವಹಿಸಿರುವ ಈ ಪಾತ್ರ ವಿಶೇಷ ಅತಿಥಿ ಪಾತ್ರವಾಗಿದ್ದರೂ ಸಹ ಆ ಪಾತ್ರಕ್ಕೆ ತನ್ನದೇ ಆದ ಗತ್ತಿದೆ. ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಎಷ್ಟು ಗತ್ತು ಗಮ್ಮತ್ತಿದೆಯೋ ಅಷ್ಟೇ ಮಟ್ಟದ ಬಿಲ್ಡಪ್ ಶಿವಣ್ಣನ ಪಾತ್ರಕ್ಕೂ ಸಹ ಇದೆ. ತಲೈವಾ- ಶಿವಣ್ಣ ಇಬ್ಬರ ಕಾಂಬೋ ಕೂಡ ಮಸ್ತ್ ಆಗಿ ತೆರೆಯ ಮೇಲೆ ಮೂಡಿ ಬಂದಿದೆ. ಒಟ್ನಲ್ಲಿ ಜೈಲರ್ ಚಿತ್ರಕ್ಕೆ ಅಭಿಮಾನಿಗಳು ಮಾರ್ಕ್ಸ್ ಕೊಟ್ಟಿದ್ದಾರೆ.

ಚಿತ್ರದಲ್ಲಿ ರಜನಿಕಾಂತ್, ಶಿವಣ್ಣ ಜೊತೆ ತಮನ್ನಾ ಭಾಟಿಯಾ, ಮೋಹನ್ ಲಾಲ್(Mohanlal), ರಮ್ಯಾ ಕೃಷ್ಣ ಸೇರಿದಂತೆ ಹಲವರು ನಟಿಸಿದ್ದಾರೆ.

Share This Article