ಜೈಪುರ್: ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಪೆಂಡಾಲ್ ನೆಲಕ್ಕುರಿಳಿ 14 ಜನರು ಮೃತಪಟ್ಟ ದುರ್ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ.
ಜಾಸೊಲ್ ಪ್ರದೇಶದ ಶಾಲೆಯೊಂದರ ಮೈದಾನದಲ್ಲಿ ರಾಮ ಕಥೆಯನ್ನು ಆಯೋಜಿಸಲಾಗಿತ್ತು. ಹೀಗಾಗಿ ಸ್ಥಳೀಯರೆಲ್ಲರೂ ರಾಮಕಥೆಯನ್ನು ಕೇಳಲು ಅಲ್ಲಿ ನೆರೆದಿದ್ದರು. ಆದರೆ ಸಂಜೆ 4.30ರ ಸುಮಾರಿಗೆ ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ಪೆಂಡಾಲ್ ಕುಸಿದು ಬಿದ್ದಿದೆ. ಇದರಿಂದಾಗಿ ಪೆಂಡಾಲ್ ಕೆಳಗೆ ಕುಳಿತಿದ್ದ 14 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Rajasthan: At least 10 dead and around 24 injured after a 'pandaal' collapsed in Barmer. Injured persons admitted to a hospital. More details awaited. pic.twitter.com/fbXEtyZ4C7
— ANI (@ANI) June 23, 2019
Advertisement
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯಿಂದಾಗಿ ಎಲೆಕ್ಟ್ರಿಕ್ ಶಾಕ್ ಉಂಟಾಗಿ ಸಾವು ಸಂಭವಿಸಿದೆ ಎಂದು ಕೆಲವರು ದೂರಿದ್ದಾರೆ.
Advertisement
ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ, ರಕ್ಷಣಾ ಕಾರ್ಯ ಕೈಗೊಂಡರು. ಈ ಘಟನೆಯ ಕುರಿತು ತನಿಖೆ ನಡೆಸಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸ್ಥಳೀಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
Advertisement
Collapse of a ‘Pandaal’ in Rajasthan’s Barmer is unfortunate. My thoughts are with the bereaved families and I wish the injured a quick recovery: PM @narendramodi
— PMO India (@PMOIndia) June 23, 2019
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆ ಕುರಿತು ಟ್ವೀಟ್ ಮಾಡಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]