LatestLeading NewsMain PostNational

ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಟೈಲರ್‌ ಶಿರಚ್ಛೇದ

Advertisements

ಜೈಪುರ: ನೂಪರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್‌ ಸ್ಟೇಟಸ್‌ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್‌ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ  ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ.

ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿದ್ದು ಮಾಲ್ಡಾದಲ್ಲಿ ಈಗ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದೆ. ವರ್ತಕರು ಅಂಗಡಿಗಳನ್ನು ಮುಚ್ಚಿದ್ದು ಪ್ರತಿಭಟನಾಕಾರರು ಹಂತಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ನಡೆದಿದ್ದು ಏನು?
ಇಬ್ಬರು ಯುವಕರು ಟೈಲರ್‌ ಕನ್ನಯ್ಯಲಾಲ್‌ ಅಂಗಡಿಗೆ ಬಂದಿದ್ದಾರೆ. ಕನ್ನಯ್ಯ ಲಾಲ್‌ ಅಳತೆ ತೆಗೆಯುವ ಸಂದರ್ಭದಲ್ಲಿ ಇವರು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ಈ ಇಬ್ಬರು ದಾಳಿ ಮಾಡುತ್ತಿರುವ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೇ ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತ ಪಡಿಸಿ ನಾವು ಈ ಕೆಲಸ ಮಾಡಿದ್ದೇವೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುತ್ತೇವೆ ಎಂದು ಚಾಕು ಹಿಡಿದು ವೀಡಿಯೋದಲ್ಲಿ ಬೆದರಿಕೆ ಒಡ್ಡಿದ್ದಾರೆ.

ವೀಡಿಯೋದಲ್ಲಿ ಏನಿದೆ?
ನಾನು ರಿಯಾಜ್ ಅಹ್ಮದ್.. ಇವನು ನನ್ನಣ್ಣ ಮೊಹಮ್ಮದ್‌. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ದ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನುಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ.

ಆರೋಪಿಗಳು ಉದಯ್‌ಪುರ ಮೂಲದವರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button