ಜೈಪುರ: ಸೇತುವೆಯಿಂದ ನದಿಗೆ ಬಸ್ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಈ ಅಪಘಾತ ಇಂದು ಮುಂಜಾನೆ ಸವಾಯಿ ಮಂಧೋಪುರ ಜಿಲ್ಲೆಯ ದುಬಿಯಲ್ಲಿ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆ ಮುರಿದು ನದಿಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಈವರೆಗೆ 26 ಮಂದಿಯ ಶವಗಳನ್ನ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸರ್ಕಲ್ ಆಫೀಸರ್ ಸುಭಾಷ್ ಮಿಶ್ರಾ ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆ ಧಾವಿಸಿದ್ದು, ಬಸ್ ಮೇಲುತ್ತುವ ಕಾರ್ಯವನ್ನು ಮಾಡುತ್ತಿದ್ದಾರೆ. ಬಸ್‍ನಲ್ಲಿದ್ದ ಬಹುತೇಕ ಪ್ರಯಾಣಿಕರು ಉತ್ತರಪ್ರದೇಶಕ್ಕೆ ಹೋಗುತ್ತಿದ್ದರು ಎಂದು ವರದಿಯಾಗಿದೆ.