ಜೈಪುರ: ಬಿಜೆಪಿ (BJP) ನಾಯಕ ಕಿರೋಡಿ ಲಾಲ್ ಮೀನಾ (Kirodi Lal Meena) ಅವರು ರಾಜಸ್ಥಾನ (Rajasthan) ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷವು ತನ್ನ ಉಸ್ತುವಾರಿಯ ಕ್ಷೇತ್ರಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣಕ್ಕೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಕಿರೋಡಿ ಮೀನಾ ಅವರು 10 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿಕೆ ಸುರೇಶ್ ಮನವಿ
ಕೃಷಿ, ಗ್ರಾಮೀಣಾಭಿವೃದ್ಧಿ, ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವರಾಗಿ ಕ್ಯಾಬಿನೆಟ್ ಖಾತೆಯನ್ನು ಹೊಂದಿದ್ದ ಮೀನಾ ಅವರು, ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದ ಏಳು ಸ್ಥಾನಗಳಲ್ಲಿ ಬಿಜೆಪಿ ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವಾಗ್ದಾನ ಮಾಡಿದ್ದರು.
ಪೂರ್ವ ರಾಜಸ್ಥಾನದ ದೌಸಾ, ಭರತ್‌ಪುರ, ಧೋಲ್‌ಪುರ್, ಕರೌಲಿ, ಅಲ್ವಾರ್, ಟೋಂಕ್-ಸವಾಯಿ ಮಾಧೋಪುರ್ ಮತ್ತು ಕೋಟಾ-ಬುಂಡಿಯಲ್ಲಿ ಪ್ರಚಾರ ಮಾಡಿದ್ದರು. ಈ ಪೈಕಿ ಕೋಟಾ ಮತ್ತು ಅಲ್ವಾರ್ ಲೋಕಸಭಾ ಸ್ಥಾನಗಳನ್ನು ಮಾತ್ರ ಬಿಜೆಪಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದನ್ನೂ ಓದಿ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಹೆಚ್‍ಡಿಕೆಗೆ ಸ್ಥಾನ