ಜೈಪುರ: ಹಿರಿಯ ವಕೀಲರು ಕಾಂಗ್ರೆಸ್ ಸಂಸ್ಕೃತಿಯ ವ್ಯಕ್ತಿಯಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ನಾಯಕತ್ವದ ವಿರುದ್ಧ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪಿಲ್ ಸಿಬಲ್ ಅವರು ಕಾಂಗ್ರೆಸ್ ಸಂಸ್ಕೃತಿಯಿಂದ ಬಂದವರಲ್ಲ. ಅವರು ಖ್ಯಾತ ವಕೀಲರಾಗಿ ಕಾಂಗ್ರೆಸ್ ಪ್ರವೇಶಿಸಿದರು. ಅವರಿಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಸಾಕಷ್ಟು ಅವಕಾಶ ನೀಡಿದ್ದಾರೆ. ಕಾಂಗ್ರೆಸ್‍ನ ಎಬಿಸಿ ಗೊತ್ತಿಲ್ಲದ ವ್ಯಕ್ತಿಗಳು ಇಂತಹ ಹೇಳಿಕೆಯನ್ನು ನೀಡಬಹುದು ಎಂದು ಕಿಡಿಕಾರಿದರು.
Advertisement
Advertisement
ಸಿಬಲ್ ಅವರು ಇಂತಹ ಹೇಳಿಕೆಯನ್ನು ನೀಡಿದು ದುರಾದೃಷ್ಟಕರವಾಗಿದೆ. ಪಕ್ಷವು ಚುನಾವಣೆಯಲ್ಲಿ ಸೋತಿರುವ ಸಮಯದಲ್ಲಿ ಎಲ್ಲಾ ನಾಯಕರು ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಉಕ್ರೇನ್‍ಗೆ ಸಹಾಯ ಮಾಡಿದರೆ ನಿಮಗೆ ನೀವೇ ಸಹಾಯ ಮಾಡಿದ ಹಾಗೇ: ಝೆಲೆನ್ಸ್ಕಿ
Advertisement
Advertisement
ನಾಯಕತ್ವವು ಕೋಗಿಲೆ ನಾಡಿನಲ್ಲಿದೆ. ನನಗೆ ಸಬ್ ಕಿ ಕಾಂಗ್ರೆಸ್‍ಬೇಕು. ಆದರೆ ಕೆಲವರಿಗೆ ಕುಟುಂಬದ ಕಾಂಗ್ರೆಸ್ ಬೇಕು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಗಾಂಧಿಯವರು ನಾಯಕತ್ವದಿಂದ ಹಿಂದೆ ಸರಿಯಬೇಕು ಎಂದು ಸಿಬಲ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಭಾನುವಾರ ಸಭೆ ನಡೆಸಿದ ನಂತರ ಈ ಹೇಳಿಕೆಗಳು ಬಂದಿದೆ. ಸುಮಾರು ಐದು ಗಂಟೆಗಳ ಚರ್ಚೆಯ ನಂತರ ಸೋನಿಯಾ ಗಾಂಧಿ ಅವರನ್ನು ಮುನ್ನಡೆಸಲು ಮತ್ತು ಪಕ್ಷವನ್ನು ಬಲಪಡಿಸಲು ಅಗತ್ಯವಾದ ಬದಲಾವಣೆಗಳನ್ನು ಪ್ರಾರಂಭಿಸಲು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ