ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (Bhajanlal Sharma) ಅವರು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ (Vasundhara Raje) ಅವರನ್ನು ಭೇಟಿ ಮಾಡುವ ಮೂಲಕ ಭಾರೀ ಕುತೂಹಲ ಹುಟ್ಟಿಸಿದ್ದಾರೆ.
ಭಜನ್‌ಲಾಲ್ ಶರ್ಮಾ ಅವರು ಸಿವಿಲ್ ಲೈನ್ಸ್‌ನಲ್ಲಿರುವ ರಾಜೇ ಅವರ ಅಧಿಕೃತ ನಿವಾಸದಲ್ಲಿ ಬೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಒಂದೂವರೆ ತಿಂಗಳ ನಂತರ ಸಿಎಂ ಭಜನ್‌ಲಾಲ್ ಶರ್ಮಾ ಮೊದಲ ಬಾರಿಗೆ ವಸುಂಧರಾ ರಾಜೇ ಅವರನ್ನು ಭೇಟಿಯಾಗಿದ್ದು, ಇದೀಗ ರಾಜಸ್ಥಾನದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
Advertisement
Advertisement
ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದ ನಂತರ ಮುಖ್ಯಮಂತ್ರಿ ಹುದ್ದೆಗೆ ವಸುಂಧರಾ ರಾಜೇ ಅವರನ್ನು ಮುಂಚೂಣಿಯಲ್ಲಿ ಪರಿಗಣಿಸಲಾಗಿದೆ. ಪಕ್ಷದ ಹೈಕಮಾಂಡ್ ಡಿಸೆಂಬರ್ 12 ರಂದು ಮೊದಲ ಬಾರಿಗೆ ಭಜನ್ ಲಾಲ್ ಶರ್ಮಾ ಅವರನ್ನು ಆಯ್ಕೆ ಮಾಡಿತು. ಇದಾದ ಬಳಿಕ ರಾಜೇ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಡಿಸೆಂಬರ್ 30 ರಂದು ನಡೆದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಕೂಡ ಅವರು ಹಾಜರಾಗಿರಲಿಲ್ಲ. ಜನವರಿ 5 ರಂದು ಪಕ್ಷದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾಸಕರಿಗೆ ಔತಣಕೂಟದಲ್ಲಿಯೂ ಅವರು ಭಾಗವಹಿಸಿರಲಿಲ್ಲ. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ
Advertisement
Advertisement
ಭೇಟಿಯ ಹಿಂದಿನ ಗುಟ್ಟೇನು..?: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ವಸುಂಧರಾ ರಾಜೇ ಅವರನ್ನು ರಾಜಸ್ಥಾನದ ಪ್ರಬಲ ನಾಯಕಿ ಎಂದು ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರನ್ನು ಕೆಣಕುವುದು ಪಕ್ಷಕ್ಕೆ ಇಷ್ಟವಿಲ್ಲ. ಹೀಗಾಗಿ ಹಾಲಿ ಸಿಎಂ ಭಜನಲಾಲ್ ಶರ್ಮಾ ಶುಕ್ರವಾರ ವಸುಂಧರಾ ರಾಜೇ ಅವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯವರು ಲೋಕಸಭೆ ಚುನಾವಣೆಗೆ ಮುನ್ನ ವಸುಂಧರಾ ರಾಜೆ ಅವರೊಂದಿಗಿನ ಸಂಬಂಧವನ್ನು ಗಟ್ಟಿಗೊಳಿಸಲು ಈ ಮೂಲಕ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.