ಜೈಪುರ: ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳಲು ತಮ್ಮ ಪುಟ್ಟ ಕಂದಮ್ಮನನ್ನು ದಂಪತಿ ಕಾಲುವೆ (Canal) ಗೆ ಎಸೆದ ಪ್ರಕರಣವೊಂದು ನಡೆದಿರುವ ಬಗ್ಗೆ ರಾಜಸ್ಥಾನ (Rajasthan) ದಲ್ಲಿ ಬೆಳಕಿಗೆ ಬಂದಿದೆ.
ಹೌದು. 5 ತಿಂಗಳ ಹೆಣ್ಣು ಮಗು (Girl Baby) ವನ್ನು ಕಾಲುವೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಕಾಲುವೆಗೆ ಎಸೆದ ಪಾಪಿ ತಂದೆಯನ್ನು ಜವಾಹರ್ ಲಾಲ್ ಎಂದು ಗುರುತಿಸಲಾಗಿದೆ. ಈತ ಚಂದಾಸರ್ ಗ್ರಾಮದಲ್ಲಿ ಶಾಲಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದನು. ಇದನ್ನೂ ಓದಿ: ಬೆಂಗ್ಳೂರಲ್ಲಿ `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಮರ್ಡರ್ – ಫ್ಲೈಟ್ ಟಿಕೆಟ್ ಬುಕ್ ಮಾಡಿ ಸಿಕ್ಕಿಬಿದ್ದ ಆರೋಪಿ!
ಕಳೆದ ವರ್ಷ ಡಿಸೆಂಬರ್ ನಲ್ಲಿ ತಾನು ನೀಡಿದ ದಾಖಲೆಯಲ್ಲಿ ಝನ್ವರ್ಲಾಲ್ ತಾನು ಇಬ್ಬರು ಮಕ್ಕಳನ್ನು ಹೊಂದಿರುವುದಾಗಿ ತಿಳಿಸಿದ್ದನು. ಆದರೆ ಇತ್ತೀಚೆಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ, ಆ ವ್ಯಕ್ತಿ ಕೆಲಸ ಕಳೆದುಕೊಳ್ಳುವ ಆತಂಕ ಆತನಿಗೆ ಎದುರಾಗಿತ್ತು.
ಬಿಕಾನೇರ್ ನ ಛತ್ತರ್ ಗಢದಲ್ಲಿ ಪುರುಷ ಮತ್ತು ಮಹಿಳೆಯೊಬ್ಬರು ಹೆಣ್ಣು ಮಗುವನ್ನು ಕಾಲುವೆಗೆ ಎಸೆದಿದ್ದಾರೆ ಎಂಬ ಮಾಹಿತಿಯನ್ನು ನಾವು ಪಡೆದುಕೊಂಡಿದ್ದೇವೆ. ನಂತರ ಮಗುವಿನ ದೇಹವನ್ನು ಪೊಲೀಸರು ವಶಪಡಿಸಿಕೊಂಡರು. ಇದೀಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಈ ಇಬ್ಬರೂ ಮೃತ ಹೆಣ್ಣು ಮಗುವಿನ ಪೋಷಕರು ಎಂದು ತಿಳಿದುಬಂದಿದೆ ಎಂದು ಸರ್ಕಲ್ ಆಫೀಸರ್ ವಿನೋದ್ ಕುಮಾರ್ ತಿಳಿಸಿದ್ದಾರೆ.
ಬಂಧಿತರನ್ನು ತನಿಖೆ ನಡೆಸಿದಾಗ, ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳುವ ಸಲುವಾಗಿ ಆರೋಪಿಯು ತನ್ನ ಮಗಳನ್ನು ಕಾಲುವೆಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k