ಜೈಪುರ: ಮೇಲ್ವರ್ಗದ ಜನರಿಗೆ (Upper Castes) ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ (Dalit Man) ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ದಾರುಣ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ.
ಜೈಸಲ್ಮೇರ್ ಜಿಲ್ಲೆಯ ದಿಗ್ಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಬ್ಬಿಣದ ರಾಡ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ಕುಡುಕನಿಂದ ಹಲ್ಲೆ
Advertisement
Advertisement
ಮಂಗಳವಾರ ಸಂಜೆ ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ ವೇಳೆ ನಾಲ್ಕೈದು ಜನ ಆತನನ್ನು ನಿಂದಿಸಿ, ಮೇಲ್ಜಾತಿಗೆ ಸೇರಿದವರು ಎಂದು ಹೇಳಿಕೊಂಡ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ.
Advertisement
Advertisement
ರಾಮ್ ಅವರ ಒಂದು ಕಿವಿಯ ಹಿಂಭಾಗ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂತ್ರಸ್ತನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನ್ಯಾಯಾಧೀಶರ ವಯೋಮಿತಿ ಹೆಚ್ಚಿಸಿ – ಸಂವಿಧಾನಿಕ ತಿದ್ದುಪಡಿಗೆ ಬಾರ್ ಕೌನ್ಸಿಲ್ ಮನವಿ