-ರಾಜಸ್ಥಾನ ಸಿಎಂ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಜಸ್ವಂತ್ ಸಿಂಗ್ ಪುತ್ರ
ಜೈಪುರ್: ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರನ್ನು ಸೋಲಿಸಲು ಕಾಂಗ್ರೆಸ್ ಪ್ರಬಲ ಅಸ್ತ್ರ ಪ್ರಯೋಗ ಮಾಡಿದ್ದು, ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಿದೆ.
ನಾಮಪತ್ರ ಸಲ್ಲಿಕೆಗೆ ನವೆಂಬರ್ 19 ಕೊನೆಯ ದಿನವಾಗಿದ್ದು, ಇಂದು ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ವಸುಂದರಾ ರಾಜೇ ಅವರಿಗೆ ಶಾಕ್ ಕೊಟ್ಟಿದೆ. ಮುಖ್ಯಮಂತ್ರಿ ವಸುಂದರಾ ರಾಜೇ ಸ್ಪರ್ಧಿಸಿರುವ ಜಲ್ವಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾನವೇಂದ್ರ ಅವರನ್ನು ಕಣಕ್ಕೆ ಇಳಿಸಲಾಗಿದೆ. ಈ ಮೂಲಕ ರಾಜಸ್ಥಾನದ ಬಿಜೆಪಿಯ ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡ ಕಾಂಗ್ರೆಸ್ ನಾಯಕರು ಭಾರೀ ರಣತಂತ್ರ ರೂಪಿಸುತ್ತಿದ್ದಾರೆ.
Advertisement
INC COMMUNIQUE
Announcement of second list of candidates for the ensuing elections to the Legislative Assembly of Rajasthan. @INCRajasthan pic.twitter.com/pXqQbCaZyT
— INC Sandesh (@INCSandesh) November 17, 2018
Advertisement
ರಜಪೂತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. 2003ರಿಂದಲೂ ವಸುಂಧರಾ ರಾಜೇ ಜಲ್ವಾರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಹೀಗಾಗಿ ಇಂದು ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಈ ರಣತಂತ್ರ ಹೂಡಿದೆ ಎನ್ನಲಾಗಿದೆ.
Advertisement
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದ ಸಚಿವರಾಗಿದ್ದ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಕಾಂಗ್ರೆಸ್‍ಗೆ ಸೇರಿದ್ದು, ಕೈ ಪಾಳಯಕ್ಕೆ ಬಲ ಬಂದಂತಾಗಿದೆ. ಮಾನವೇಂದ್ರ ಸಿಂಗ್ ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಬೆನ್ನಲ್ಲೇ ಮಾಜಿ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಸಂಸದ ಹರೀಶ್ ಮೀನಾ ಅವರು ನವೆಂಬರ್ 14ರಂದು ಕಾಂಗ್ರೆಸ್ ಮನೆ ಪ್ರವೇಶ ಮಾಡಿದ್ದರು. ಈ ಭಾರೀ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಲಿವೆ.
Advertisement
I'm honoured that Rahul Gandhi Ji& Congress CEC thought it useful for me to contest & I'm touched by responsibility shown towards me. I accept the responsibility&will run a fair campaign: Manvendra Singh, Congress candidate against Rajasthan CM from Jhalrapatan #RajasthanElection pic.twitter.com/qSQ08lSqzo
— ANI (@ANI) November 17, 2018
ವಸುಂದರಾ ರಾಜೇ ಪ್ರತಿಕ್ರಿಯೆ:
ನನ್ನ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಸಿಂಗ್ ಅವರನ್ನು ನನ್ನ ವಿರುದ್ಧ ಕಣಕ್ಕಿಳಿಸಿದ್ದಾರೆ ಎಂದು ರಾಜಸ್ಥಾನ ಸಿಎಂ ವಸುಂಧರಾ ರಾಜೇ ಕಿಡಿಕಾರಿದ್ದಾರೆ.
ಜಲ್ವಾರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಕಾಂಗ್ರೆಸ್‍ನಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆಯಿದೆ. ಇದರಿಂದಾಗಿ ಇಲ್ಲಿಂದ ಹೋದವರಿಗೆ ಟಿಕೆಟ್ ನೀಡಿದ್ದಾರೆ. ನಾವು ಅವರನ್ನು ಇಲ್ಲಿಂದಲೂ ಹೊರ ಹಾಕುತ್ತೇವೆ ಎಂದು ಮಾನವೇಂದ್ರ ಸಿಂಗ್ ವಿರುದ್ಧ ಹರಿಹಾಯ್ದರು.
Rajasthan Chief Minister Vasundhara Raje files her nomination for the upcoming Assembly Elections at Jhalawar secretariat pic.twitter.com/jjmJPOmxXd
— ANI (@ANI) November 17, 2018
Rajasthan CM Vasundhara Raje offers prayers at Balaji temple in Jhalawar before filing nomination for the upcoming assembly elections pic.twitter.com/UXZYxsoATm
— ANI (@ANI) November 17, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews