ಜೈಪುರ್: ರಾಜಸ್ಥಾನದ ಮಹಿಳಾ ಘಟಕದ ಉಪಾಧ್ಯಕ್ಷೆಯನ್ನು ಪಕ್ಷದಿಂದ ಆರು ವರ್ಷ ವಜಾಗೊಳಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಸ್ಪರ್ಧಾ ಚೌಧರಿ ಅವರು ಈ ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಮೂಲಕ ಸ್ಪರ್ಧಾ ಚೌದರಿ ಮಹಿಳಾ ಘಟಕದ ಉಪಾಧ್ಯಕ್ಷೆ ಸ್ಥಾನ ಹಾಗೂ ಪಕ್ಷದಿಂದ ವಜಾಗೊಂಡಿದ್ದಾರೆ ಎಂದು ವರದಿಯಾಗಿದೆ.
Advertisement
ಆಗಿದ್ದೇನು?:
ಸ್ಪರ್ಧಾ ಚೌದರಿ ಅವರು ಪುಲೇರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮೊದಲ ಪಟ್ಟಿಯಲ್ಲಿಯೇ ವಿದ್ಯಾಧರ್ ಚೌಧರಿ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಇದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೆಹಲಿ ನಿವಾಸದ ಮುಂಭಾಗದಲ್ಲಿ ಇಂದು ಬೆಳಗ್ಗೆ ಚೌಧರಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.
Advertisement
Advertisement
ಕಾಂಗ್ರೆಸ್‍ನ ರಾಜಸ್ಥಾನ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಅವರು ಟಿಕೆಟ್ ಹಂಚಿಕೆಯಲ್ಲಿ ಹಣ ಪಡೆಯುತ್ತಿದ್ದಾರೆ. ಹೀಗಾಗಿ ನನ್ನನ್ನು ಕಡೆಗಣಿಸಿ ವಿದ್ಯಾಧರ್ ಚೌಧರಿ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದು ಸ್ಪರ್ಧಾ ಚೌಧರಿ ದೂರಿದ್ದರು.
Advertisement
ಈ ಎಲ್ಲ ಬೆಳವಣಿಗೆಯನ್ನು ಗಮನಿಸಿದ್ದ ರಾಹುಲ್ ಗಾಂಧಿ ಹಾಗೂ ಹೈಕಮಾಡ್ ಸ್ಪರ್ಧಾ ಚೌಧರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ನವೆಂಬರ್ 19ರಂದು ಮುಕ್ತಾಯವಾಗಲಿದೆ. ಕಾಂಗ್ರೆಸ್ 32 ಜನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ವಸುಂದರಾ ರಾಜೇ ಅವರಿಗೆ ಶಾಕ್ ಕೊಟ್ಟು, ಮಾನವೇಂದ್ರ ಅವರನ್ನು ಕಣಕ್ಕೆ ಇಳಿಸಿದೆ. ಡಿಸೆಂಬರ್ 7ರಂದು ಮತದಾನ ನಡೆಯಲಿದ್ದು, ವರ್ಷಾಂತ್ಯದಲ್ಲಿಯೇ ರಾಜಸ್ಥಾನದಲ್ಲಿ ಹೊಸ ಸರ್ಕಾರ ಆಡಳಿತದ ಚುಕ್ಕಾನೆ ಹಿಡಿಯಲಿದೆ.
Spardha Chaudhary has been expelled from Congress for six years. Earlier today, her supporters held a protest outside Rahul Gandhi's residence in Delhi as she has not been given a ticket to contest elections from Rajasthan's Fulera.
— ANI (@ANI) November 17, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews