ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸುದೀರ್ಘ ರಜೆಗೆ ತೆರಳಿದ್ದಾರಾ ಎಂದು ಕೇಂದ್ರ ಸಚಿವ ಅನೂರಾಗ್ ಠಾಕೂರ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡರು. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು, ಕೊಲೆಗಳಂತಹ ಭೀಕರ ಘಟನೆಗಳು ನಡೆಯುತ್ತಿವೆ. ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗಾಂಧಿ ಕುಟುಂಬ ಏಕೆ ಮಾತನಾಡುತ್ತಿಲ್ಲ. ಅವರು ಸುದೀರ್ಘ ರಜೆ ತೆಗೆದುಕೊಂಡಿದ್ದಾರಾ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಇಷ್ಟೆಲ್ಲಾ ಆಗುತ್ತಿದ್ದರೂ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸರ್ಕಾರ ಏಕೆ ಮೂಕ ಪ್ರೇಕ್ಷಕರಂತಾಗಿದೆ ಎಂದು ಪ್ರಶ್ನಿಸಿದ ಅವರು, ಗಾಢ ನಿದ್ದೆಯಲ್ಲಿರುವ ರಾಜಸ್ಥಾನ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪತ್ನಿ ಸಂಬಳ ನೀಡದಿದ್ದಕ್ಕೆ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಪತಿಯಿಂದ ಹಲ್ಲೆ
ದೌಸಾ ಜಿಲ್ಲೆಯ ಹಳ್ಳಿಯೊಂದರಲ್ಲಿ 35 ವರ್ಷದ ವಿವಾಹಿತ ಮಹಿಳೆಯನ್ನು ಇಬ್ಬರು ಪುರುಷರು ಗ್ಯಾಂಗ್ ರೇಪ್ ಮಾಡಿ ಹತ್ಯೆ ಮಾಡಿದ್ದರು. ನಂತರ ಸೋಮವಾರ ಜೈಪುರ ಜಿಲ್ಲೆಯ ಬಸ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು