ವೀಡಿಯೋ: ಗೋವುಗಳನ್ನು ಸಾಗಿಸುತ್ತಿದ್ದವರ ಮೇಲೆ ಗೋರಕ್ಷಕರಿಂದ ಹಲ್ಲೆ, ವ್ಯಕ್ತಿ ಸಾವು

Public TV
1 Min Read
cow vigilantes alwar

ಜೈಪುರ್: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾರೆಂದು ಆರೋಪಿಸಿ 5 ಜನರ ಮೇಲೆ ಗೋರಕ್ಷಕರು ಹಲ್ಲೆ ನಡೆಸಿದ್ದು, ಓರ್ವ ಮುಸ್ಲಿಂ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಇಲ್ಲಿನ ಅಲ್ವಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರದಂದು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನ ತಡೆದ ಗೋರಕ್ಷಕರು ಸುಮಾರು 5 ಜನರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಹರಿಯಾಣದವರಾದ 55 ವರ್ಷದ ಪೆಹ್ಲು ಖಾನ್ ಸೋಮವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಲ್ಲೆಗೊಳಗಾದ ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

cow vigilantes alwar 1

ವಾಹನದಿಂದ ಅವರನ್ನ ಎಳೆದು ತಂದು ಥಳಿಸುತ್ತಿರುವುದನ್ನ ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗುಜರಾತ್‍ನಲ್ಲಿ ಇನ್ಮುಂದೆ ಗೋಹತ್ಯೆಗೆ ಜೀವಾವಧಿ ಶಿಕ್ಷೆ

Share This Article
Leave a Comment

Leave a Reply

Your email address will not be published. Required fields are marked *