ಜೈಪುರ್: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾರೆಂದು ಆರೋಪಿಸಿ 5 ಜನರ ಮೇಲೆ ಗೋರಕ್ಷಕರು ಹಲ್ಲೆ ನಡೆಸಿದ್ದು, ಓರ್ವ ಮುಸ್ಲಿಂ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಇಲ್ಲಿನ ಅಲ್ವಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರದಂದು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನ ತಡೆದ ಗೋರಕ್ಷಕರು ಸುಮಾರು 5 ಜನರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಹರಿಯಾಣದವರಾದ 55 ವರ್ಷದ ಪೆಹ್ಲು ಖಾನ್ ಸೋಮವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಲ್ಲೆಗೊಳಗಾದ ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
Advertisement
Advertisement
ವಾಹನದಿಂದ ಅವರನ್ನ ಎಳೆದು ತಂದು ಥಳಿಸುತ್ತಿರುವುದನ್ನ ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
ಇದನ್ನೂ ಓದಿ: ಗುಜರಾತ್‍ನಲ್ಲಿ ಇನ್ಮುಂದೆ ಗೋಹತ್ಯೆಗೆ ಜೀವಾವಧಿ ಶಿಕ್ಷೆ
#WATCH: 5 men beaten up & their vehicle vandalised by cow vigilantes in Rajasthan's Alwar; later 1 man succumbed to injuries (01.04.2017) pic.twitter.com/almfW9W954
— ANI (@ANI_news) April 5, 2017