ರಾಜಸ್ಥಾನ: ಇಲ್ಲಿನ ಮತಗಟ್ಟೆಯೊಂದರಲ್ಲಿ ಅಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗೆ ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.
ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
Advertisement
ಸಂರವತ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಗೆ ತೆರಳಿದ್ದ ಮೀನಾ ಅವರು, ಚುನಾವಣಾ ಪ್ರೋಟೋಕಾಲ್ ಅನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ಮಾಡದಂತೆ ತಡೆದಿದ್ದಾರೆ.
Advertisement
2018 ಮತ್ತು 2023 ರಲ್ಲಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ಹರೀಶ್ ಚಂದ್ರ ಮೀನಾ ಅವರು ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಗೆ ಪ್ರವೇಶಿಸಿದ್ದಾರೆ. ತೆರವಾಗಿದ್ದ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.
Advertisement
1,914 ಮತಗಟ್ಟೆಗಳಲ್ಲಿ 9,000 ಸಿಬ್ಬಂದಿ ನಿಯೋಜಿಸಲಾಗಿದ್ದು, ಡಿಯೋಲಿ-ಉನಿಯಾರಾ ಸೇರಿದಂತೆ ರಾಜಸ್ಥಾನದಾದ್ಯಂತ ಏಳು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.