ಜೈಪುರ: ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ತಮ್ಮನ್ನು ಬೆಂಬಲಿಸಿ ಮತ ನೀಡುವಂತೆ ಕೈಮುಗಿದು ಬೇಡಿಕೊಳ್ತಾರೆ, ಕಾಲಿಗೂ ಬೀಳುತ್ತಾರೆ. ಇದರಲ್ಲಿ ಹೊಸತೇನೂ ಇರುವುದಿಲ್ಲ. ಆದರೆ ಇಲ್ಲೊಬ್ಬ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಗೆ ಮತ ಕೇಳಲು ವಿನೂತನ ಪ್ರಯತ್ನ ಮಾಡಿದ್ದಾನೆ.
राजस्थान विश्वविद्यालय छात्र संघ चुनाव के दौरान प्रत्याशियों ने सड़क पर लेटकर पैर पकड़कर माँगे वोट. pic.twitter.com/rmvlgCFXgJ
— UnSeen India (@USIndia_) August 26, 2022
Advertisement
ಮತದಾನಕ್ಕೂ ಮುನ್ನ ರಸ್ತೆಯಲ್ಲೇ ಯುವತಿಯರನ್ನ ತಡೆದು ನಿಲ್ಲಿಸಿ ಅವರ ಕಾಲಿಗೆ ಬೀಳುತ್ತಾ ನನಗೆ ವೋಟು ಕೊಡಿ ಎಂದು ಅಂಗಲಾಚಿದ್ದಾನೆ. ಯುವಕ ಕಾಲಿಗೆ ಬೀಳುತ್ತಿರುವುದಕ್ಕೆ ಯುವತಿಯರು ನಾಚಿ ನೀರಾಗಿದ್ದರು. ಹೀಗೆಲ್ಲಾ ಮಾಡ್ಬೇಡಿ ಎನ್ನುತ್ತಾ ಕಾಲ್ಕಿತ್ತಿದ್ದರು. ಸದ್ಯ ಯುವಕ ಕಾಲಿಗೆ ಬೀದಿದ್ದ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ನಟಿ, ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಕೊಲೆಗೆ ಮೆಗಾ ಟ್ವಿಸ್ಟ್: ವೈರಲ್ ವಿಡಿಯೋ ಬಗ್ಗೆ ಅನುಮಾನ
Advertisement
Advertisement
ರಾಜಸ್ಥಾನದ ಬರಾನ್‌ನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿದ್ದ ಯುವಕ ರಸ್ತೆಯಲ್ಲೇ ಯುವತಿಯರನ್ನು ತಡೆದು ನಿಲ್ಲಿಸಿ ಒಬ್ಬೊಬ್ಬರಿಗೂ ಕಾಲಿಗೆ ಬಿದ್ದು, ಮತ ಕೊಡಿ ಎಂದು ಕೇಳಿದ್ದಾನೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧಿಸಿದ ಬಿಎಸ್‌ಎಫ್
Advertisement
ಅಂದಹಾಗೆ ಸಂಘದ ಚುನಾವಣೆ ನಿನ್ನೆ (ಶುಕ್ರವಾರ) ನಡೆದಿದೆ. ಇಂದು ಎಣಿಕೆ ನಡೆಯುತ್ತಿದ್ದು, ಸಂಜೆಯ ವೇಳೆ ಫಲಿತಾಂಶ ಹೊರಬೀಳಲಿದೆ. ಆದರೆ ಮತದಾನಕ್ಕೂ ಮುನ್ನ ಯುವಕರು ಪರಿಪರಿಯಾಗಿ ಬೇಡಿಕೊಂಡಿದ್ದ ವೀಡಿಯೋ ವೈರಲ್ ಆಗಿದೆ.