ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ‘ಬಿಗ್ ಬಾಸ್’ ಖ್ಯಾತಿಯ ರಜತ್ (Rajath), ವಿನಯ್ ಗೌಡ (Vinay) ಇಂದು (ಮಾ.29) ಜೈಲಿನಿಂದ ರಿಲೀಸ್ ಆಗಿದ್ದಾರೆ. ಇದನ್ನೂ ಓದಿ:ದರ್ಶನ್ ಅಭಿಮಾನಿಗಳಿಂದ ಥಿಯೇಟರ್ ಧ್ವಂಸ ಆರೋಪ – ದೇವ್ರು ಒಳ್ಳೆಯದು ಮಾಡ್ಲಿ ಎಂದ ಧನ್ವೀರ್!
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ಮತ್ತು ವಿನಯ್ಗೆ ನಿನ್ನೆ (ಮಾ.28) 24ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಪೊಲೀಸರ ಕೈಗೆ ಬೇಲ್ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆ ಇಂದು ರಜತ್ ಹಾಗೂ ವಿನಯ್ ಜೈಲಿನಿಂದ ಇಂದು ರಿಲೀಸ್ ಆಗಿದ್ದಾರೆ.ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್ ಕೇಸ್ ಬಗ್ಗೆ ಧನ್ವೀರ್ ಮಾತು
ರಿಲೀಸ್ ಆದ ಬೆನ್ನಲ್ಲೇ ಮಾಧ್ಯಮಕ್ಕೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದೀರಾ. ಎಲ್ಲರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ತೆರಳಿದ್ದಾರೆ.
ಇನ್ನೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ರಜತ್, ವಿನಯ್ರನ್ನು ಬಂಧಿಸಲಾಗಿತ್ತು. ಮಾ.26ರಿಂದ ಮಾ.28ರವರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿತ್ತು. ನಿನ್ನೆ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇನ್ನೂ ರಜತ್ ಅವರು ದರ್ಶನ್ ನಟನೆಯ ‘ಕರಿಯ’ (Kariya) ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದರು.