‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ (Rajavardan) ಇದೀಗ ಹಿರಣ್ಯ (Hiranya Film) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ‘ಪದೇ ಪದೇ’ (Padhe Padhe) ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ.
ಈ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವೇದಾಸ್ ಇನ್ಫಿನಿಟಿ ಪಿಚ್ಚರ್ ಬ್ಯಾನರ್‌ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಮನೆಯ ಮೇಲೆ ಗುಂಡಿನ ದಾಳಿ- ಸಲ್ಮಾನ್ ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು
‘ಬಿಗ್ ಬಾಸ್’ (Bigg Boss) ಖ್ಯಾತಿಯ ದಿವ್ಯಾ ಸುರೇಶ್ (Divya Suresh) ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ಅವರು ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.
‘ಹಿರಣ್ಯ’ ಸಿನಿಮಾಗೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಈ ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಹಿರಣ್ಯ’ ಟೀಮ್ ನಿರತರಾಗಿದ್ದಾರೆ.