ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ‘ಹಿರಣ್ಯ’ (Hiranya) ಸಿನಿಮಾದ ಶೂಟಿಂಗ್ (Shooting) ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಇದನ್ನೂ ಓದಿ:ಎರಡೂವರೆ ದಶಕದ ಬಳಿಕ ಬಾಲಿವುಡ್ ಗೆ ಮರಳಿದ ಜ್ಯೋತಿಕಾ
‘ಹಿರಣ್ಯ’ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್ ಅವ್ಯೂಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಜವರ್ಧನ್‌ಗೆ(Rajavardhan) ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದಾರೆ.

View this post on Instagram
ವೇದಾಸ್ ಇನ್ಫಿನಿಟಿ ಪಿಕ್ಚರ್ ಬ್ಯಾನರ್‌ನಡಿ ವಿಘ್ನೇಶ್ವರ. ಯು- ವಿಜಯ್ ಕುಮಾರ್ ಬಿ.ವಿ ‘ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್ ಆರ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.


