ಕನ್ನಡದ ಯುವ ಪ್ರತಿಭಾವಂತ ನಟ ‘ಬಿತ್ತುಗತ್ತಿ’ ಚಿತ್ರಖ್ಯಾತಿಯ ರಾಜವರ್ಧನ್ ತಮ್ಮ ಹುಟ್ಟುಹಬ್ಬವನ್ನು ನೇತ್ರದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್
ಹುಟ್ಟು ಹಬ್ಬದ ಖುಷಿಯಲ್ಲಿರುವ ರಾಜವರ್ಧನ್ ಯುವಕರಿಗೆ ಮಾದರಿಯಾಗುವಂತೆ ಅರ್ಥಪೂರ್ಣವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂದು ಅವರು ಮಿಂಟೋ ಆಸ್ಪತ್ರೆಯಲ್ಲಿ ನೇತ್ರಾದಾನ ಮಾಡಲು ರಾಜವರ್ಧನ್ ನೋಂದಣಿ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಿಂಟೋ ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಜಾತಾ ರಾಥೋಡ್, ಡಾ.ಮಂಜುನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?
ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ವುಕಡ್ ಗೆ ಎಂಟ್ರಿ ಕೊಟ್ಟಿದ್ದ ಡಿಂಗ್ರಿ ನಾಗರಾಜ್ ಪುತ್ರ ನಟ ರಾಜವರ್ಧನ್ ಮೊದಲ ಸಿನಿಮಾದಲ್ಲಿ ಭರವಸೆ ನಾಯಕ ಮಿಂಚಿದ್ದಾರೆ. ಸದ್ಯ ಹಿರಣ್ಯ ಸಿನಿಮಾದಲ್ಲಿ ನಟಿಸ್ತಿರುವ ರಾಜವರ್ಧನ್, ಅತ್ತ ಪ್ರಣಯಂ ಸಿನಿಮಾ ಮುಗಿಸಿ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಅಂದಹಾಗೇ ಹಿರಣ್ಯ ಚಿತ್ರಕ್ಕೆಪ್ರವೀಣ್ ಅವ್ಯುಕ್ತ್ ನಿರ್ದೇಶನದ ಮಾಡ್ತಿದ್ದು, ವಿಘ್ನೇಶ್ವರ ಮತ್ತು ವಿಜಯ್ ಕುಮಾರ್ ಬಂಡವಾಳ ಹೂಡಿದ್ದಾರೆ. ತೆಲುಗಿನ ಹುಡುಗಿ ರಿಹಾನಾ ನಾಯಕಿಯಾಗಿ ನಟಿಸ್ತಿದ್ದಾರೆ.