Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್

Cinema

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್

Public TV
Last updated: January 24, 2026 6:26 pm
Public TV
Share
2 Min Read
Veer Kambala
SHARE

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ ಚಿತ್ರ (Veer Kambala) `ವೀರ ಕಂಬಳ’. ಕಂಬಳ ಎಂಬುದು ತುಳುನಾಡಿನ ನೆಲಮೂಲದ ಸಂಸ್ಕೃತಿಯ ಸೆಲೆಯಂಥಾ ಕ್ರೀಡೆ. ಅದಕ್ಕೆ ಎಂಟುನೂರು ವರ್ಷಗಳಿಗೂ ಹೆಚ್ಚಿನ ಸಮೃದ್ಧವಾದ ಇತಿಹಾಸವಿದೆ. ಕಾಲ ಕಳೆದಂತೆ ಒಂದಷ್ಟು ಕಾನೂನು ತೊಡಕುಗಳೆದುರಾಗುವ ಮೂಲಕ ಕಂಬಳ ಒಂದಷ್ಟು ರೂಪಾಂತರಗಳನ್ನು ಹೊಂದಿದೆ. ಅದರ ನಿಖರ ಇತಿಹಾಸದ ಜಾಡಿನಲ್ಲಿ ಹೆಜ್ಜೆಯಿಡುವ ಮೂಲಕ ರಾಜೇಂದ್ರ ಸಿಂಗ್ ಬಾಬು, ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಈ ಚಿತ್ರವನ್ನು ರೂಪಿಸಿದ್ದಾರೆ. ಆರಂಭದಿಂದಲೂ ಸುದ್ದಿ ಕೇಂದ್ರದಲ್ಲಿರುವ ವೀರ ಕಂಬಳ ಚಿತ್ರವನ್ನು ಇದೇ ಫೆಬ್ರವರಿ ತಿಂಗಳಿನಲ್ಲಿ ತೆರೆಗಾಣಿಸಲು ಚಿತ್ರತಂಡ ನಿರ್ಧರಿಸಿದೆ.

ಕಂಬಳವನ್ನು ಕೇಂದ್ರವಾಗಿಟ್ಟುಕೊಂಡು ಈ ಕಥೆ, ಚಿತ್ರಕಥೆ ಸಿದ್ಧಪಡಿಸಲು ನಿರ್ದೇಶಕರು ಎರಡು ವರ್ಷಗಳ ಕಾಲ ಶ್ರಮ ವಹಿಸಿದ್ದಾರೆ. ತುಳು ರಂಗಭೂಮಿಯ ಪ್ರಸಿದ್ಧ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆಯ ಮೂಲಕ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ. ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಾಯಕನಾಗಿ ಸವಾಲಿನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಂದು ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಅಣಿಗೊಳಿಸಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ

ದಕ್ಷಿಣ ಕನ್ನಡದ ಮೂಡುಬಿದರೆಯ ಬಳಿಯಲ್ಲಿ ವಿಶಾಲವಾದ ಕಂಬಳದ ಗದ್ದೆಯನ್ನು ಸಿದ್ಧಪಡಿಸಿ, ಅಲ್ಲಿ ಪ್ರಧಾನ ದೃಷ್ಯಗಳನ್ನು ಸೆರೆಹಿಡಿಯಲಾಗಿದೆ. ಪ್ರತೀ ದಿನವೂ ಇಪ್ಪತ್ತು ಜೊತೆ ಕೋಣಗಳು ಹಾಗೂ ಐನೂರಕ್ಕೂ ಅಧಿಕ ಮಂದಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದರಂತೆ. ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್ ಗೌಡ ಇಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ದುಬೈನಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳ ಅಂತಿಮ ಘಟ್ಟದಲ್ಲಿರುವ ಚಿತ್ರತಂಡ ಇಷ್ಟರಲ್ಲಿಯೇ ಬಿಡುಗಡೆಯ ನಿಖರ ದಿನಾಂಕ ಘೋಷಿಸಲಿದೆ.

ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸದೊಂದಿಗೆ ವೀರ ಕಂಬಳ ಕಳೆಗಟ್ಟಿಕೊಂಡಿದೆ. ಇದನ್ನೂ ಓದಿ: ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ

TAGGED:Rajendra Singh BabusandalwoodVeer Kambala
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
9 minutes ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
52 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
53 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
1 hour ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
2 hours ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?