ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದೆ.
Advertisement
ಹೌದು, ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದ ಅಂತ್ಯೋದಯ, ಬಿಪಿಎಲ್ ಪಡಿತರದಾರರ ಮೇಲಿನ ಕ್ರಮಕ್ಕೆ ಬ್ರೇಕ್
Advertisement
Advertisement
ಕಳೆದ ವರ್ಷದ ಡಿಸೆಂಬರ್‌ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
Advertisement
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಇದು ತಪ್ಪಾಗಿ ಸೇರ್ಪಡೆಯಾದ ಹೆಸರಾ ಅಥವಾ ಅದೇ ಹೆಸರಿನ ಬೇರೆಯವರಾ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ. ಇದನ್ನೂ ಓದಿ: ಮದರಸಾಗಳಿಗಾಗಿ ವಿಶೇಷ ಮಂಡಳಿ ರಚನೆಗೆ ಪ್ಲಾನ್- ತಜ್ಞರ ವರದಿ ಕೇಳಿದ ಸಚಿವ ನಾಗೇಶ್