ಭಾರತೀಯ ಸಿನಿಮಾ ರಂಗದ ದಿಗ್ಗಜರುಗಳಾದ ರಜನಿ ಮತ್ತು ಅಮಿತಾಭ್ ಬಚ್ಚನ್ (Amitabh Bachchan) ಅವರ ಸಮಾಗಮಾ ಆಗಿದೆ. ಕೌನ್ ಬನೇಗಾ ಕರೋಡ್ಪತಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಅಮಿತಾಭ್ ಈಗ ವೆಟ್ಟೈಯನ್ (Vettaiyan) ಚಿತ್ರದ ಶೂಟಿಂಗ್ (Shooting) ನಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋವನ್ನು ನಿರ್ಮಾಣ ಸಂಸ್ಥೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
Advertisement
ರಜನಿಕಾಂತ್ (Rajanikanth) ನಟನೆಯ ‘ಲಾಲ್ ಸಲಾಂ’ (Lal Salaam) ಸಿನಿಮಾ ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದರು. ಆದರೂ, ಅಂದುಕೊಂಡಷ್ಟು ಚಿತ್ರಕ್ಕೆ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗಲಿಲ್ಲ. ಮೊದಲ ದಿನ ಗಳಿಕೆ ನಾಲ್ಕುವರೆ ಕೋಟಿ ಎಂದು ಅಂದಾಜಿಸಲಾಗಿತ್ತು. ‘ಲಾಲ್ ಸಲಾಂ’ ಸೋಲಿನ ಬೆನ್ನಲ್ಲೇ ಹೊಸ ಸಿನಿಮಾ ತಲೈವ ಘೋಷಿಸಿದ್ದರು. ಅದೇ ವೆಟ್ಟೈಯನ್.
Advertisement
Advertisement
‘ವೆಟ್ಟೈಯನ್’ ಲಾಲ್ ಸಲಾಂ ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯೇ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಶೇಕಡ 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಇನ್ನುಳಿದ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ರಜನಿಕಾಂತ್ ಮಾಹಿತಿ ನೀಡಿದ್ದರು.
Advertisement
’ವೆಟ್ಟೈಯನ್’ ತಲೈವ ಅವರು ನಟಿಸುತ್ತಿರುವ 170ನೇ ಸಿನಿಮಾ. ಟೈಟಲ್ ಟೀಸರ್ ನೋಡಿದ ಎಲ್ಲರೂ ಈಗಾಗಲೇ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾಗೆ ‘ಜೈ ಭೀಮ್’ ಖ್ಯಾತಿಯ ಟಿ.ಜೆ. ಜ್ಞಾನವೇಲ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.