ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ (Rajinikanth), ತಮ್ಮ ಹೆಸರನ್ನು ವಾಣಿಜ್ಯ ಬಳಕೆಗೆ ಬಳಸದಂತೆ ಸಾರ್ವಜನಿಕವಾಗಿ ಎಚ್ಚರಿಕೆ ನೋಟಿಸ್ ನೀಡಿದ್ದಾರೆ. ಕೇವಲ ತಮ್ಮ ಹೆಸರು ಮಾತ್ರವಲ್ಲ, ತಮ್ಮ ಸ್ಟೈಲ್ (Style), ಸಿನಿಮಾದ ತುಣುಕು, ಧ್ವನಿ (Voice) ಹಾಗೂ ಮ್ಯಾನರಿಸಂ ಅನ್ನು ಬಳಸದಂತೆ ಅವರು ಸಾರ್ವಜನಿಕವಾಗಿ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ತಗೆದುಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
Advertisement
ರಜನಿಕಾಂತ್ ಅರಿವಿಗೆ ಬಾರದಂತೆ ಅವರು ಫೋಟೋ, ವಿಡಿಯೋ ತುಣುಕು, ಧ್ವನಿ ಮತ್ತು ವಿವಿಧ ಸ್ಟೈಲ್ ನ ಚಿತ್ರಗಳನ್ನು ವಾಣಿಜ್ಯ ಬಳಕೆಗಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂಥದ್ದೊಂದು ನೋಟಿಸ್ ಅನ್ನು ಅವರು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ರಜನಿಕಾಂತ್ ಅವರ ಪರವಾನಿಗೆ ತಗೆದುಕೊಂಡು ಬಳಸುವಂತೆಯೂ ಅವರು ಮನವಿ ಮಾಡಿದ್ದಾರೆ. ಅಲ್ಲದೇ, ತಮ್ಮ ಗೌರವಕ್ಕೆ ಧಕ್ಕೆ ತರುವಂತೆ ಕೆಲವು ಕಡೆ ಬಳಕೆ ಆಗಿರುವ ಕುರಿತೂ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ
Advertisement
Advertisement
ಈ ಹಿಂದೆ ಇಂಥದ್ದೊಂದು ಸಾರ್ವಜನಿಕ ನೋಟಿಸ್ ಅನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಕೂಡ ನೀಡಿದ್ದರು. ನಾನಾ ಜಾಹೀರಾತುಗಳಲ್ಲಿ ಅಮಿತಾಭ್ ಅವರನ್ನು ಬಳಕೆ ಮಾಡಿದ್ದರ ವಿರುದ್ಧ ಕಿಡಿಕಾರಿದ್ದರು. ವಾಣಿಜ್ಯ ಉದ್ದೇಶ ಇಟ್ಟುಕೊಂಡು ಅಮಿತಾಭ್ ಫೋಟೋ, ಧ್ವನಿ ಮತ್ತು ಸಿನಿಮಾದ ತುಣುಕುಗಳನ್ನು ಬಳಸಿದವರು ವಿರುದ್ಧ ಚಾಟಿ ಬೀಸಿದ್ದರು. ಕಾನೂನು ಕ್ರಮಕ್ಕೂ ಅವರು ಮುಂದಾಗಿದ್ದರು. ಇದೀಗ ರಜನಿಕಾಂತ್ ಅದೇ ಹಾದಿಯನ್ನು ಹಿಡಿದಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k