ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅಂಥದ್ದೇ ಒಂದು ಸರ್ ಪ್ರೈಸ್ ನೀಡಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್. ಕಾಂತಾರ ಸಿನಿಮಾ ನೋಡಿದ ಮೇಲೆ ರಿಷಬ್ ಜೊತೆ ಮಾತನಾಡಿದ ರಜನಿ, ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.
- Advertisement 2-
ರಜನಿ (Rajinikanth) ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ
- Advertisement 3-
- Advertisement 4-
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. ನಿನ್ನೆವರೆಗೂ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.
ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.
ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ (Box Office) ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.