ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ಅವರ ಮಗಳಾದ ಐಶ್ವರ್ಯಾರವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಐಶ್ವರ್ಯಾರವರಿಗೆ ಮಂಗಳವಾರ ಕೋವಿಡ್ ಪರಿಕ್ಷೆ ಮಾಡಲಾಗಿತ್ತು. ಈ ಕುರಿತು ಅವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪಾಸಿಟಿವ್ ಬಂದ ವಿಚಾರವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಕಟೌಟ್ ಡ್ರೆಸ್‍ನಲ್ಲಿ ನೋರಾ ಫತೇಹಿ ಸಖತ್ ಹಾಟ್
View this post on Instagram
ಕೋವಿಡ್ ವಿರುದ್ಧದ ಎಲ್ಲಾ ಮುನ್ನೆಚ್ಚರಿಕೆ ವಹಿಸಿದರೂ ಸಹ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಮಾಸ್ಕ್ ಅಪ್ ಮಾಡಿ, ಲಸಿಕೆ ಹಾಕಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿಯವರು ದೇವರ ಸ್ವರೂಪ: ಶಿವರಾಜ್ ಸಿಂಗ್ ಚೌಹಾಣ್
ದಯವಿಟ್ಟು ನೀವು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಶುಭ ಹಾರೈಸಿದ್ದಾರೆ.
ಕಳೆದ ತಿಂಗಳು ಐಶ್ವರ್ಯಾ ಮತ್ತು ಧನುಷ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪರಸ್ಪರ ಒಮ್ಮತದ ವಿಚ್ಛೇದನ ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.