ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ ಸೂಪರ್ ಸ್ಟಾರ್ ಅಬ್ಬರಿಸಿದ್ದಾರೆ. ಬರೀ ಸೋಲುಗಳ ಸುಳಿಯಲ್ಲೇ ತಿರುಗುತ್ತಿದ್ದ ರಜನಿಗೆ ಜೈಲರ್ ಕೈ ಹಿಡಿದಿದೆ.
ಜೈಲರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಏಳು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಎಲ್ಲ ರಾಷ್ಟ್ರಗಳಲ್ಲೂ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಹಾಗಾಗಿ ಮೊದಲನೇ ದಿನ 72 ಕೋಟಿ ರೂಪಾಯಿ ಬಾಚಿದ್ದರೆ, ಎರಡನೇ ದಿನದ ಅಂತ್ಯಕ್ಕೆ 100 ಕೋಟಿ ರೂಪಾಯಿ ದಾಟಿದೆ (Hundred Crore Club) ಎಂದು ಹೇಳಲಾಗುತ್ತಿದೆ. ಸಾಲು ಸಾಲು ರಜೆಗಳು ಇರುವುದರಿಂದ ನಾಲ್ಕು ದಿನದ ಗಳಿಕೆ ಇನ್ನೂ ನೂರು ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಅಂಗೀಕಾರ
‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿತ್ತು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸಿದ್ದ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.
ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿತ್ತು. ಇನ್ನು ಬಾಲಿವುಡ್ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಕ್ಕಿದೆ.
Web Stories